ನಾಗ್ಪುರ್(ಜು.21):  ಸಂಸ್ಕೃತ ಭಾಷೆ ಗೊತ್ತಿಲ್ಲದೆ ಭಾರತವನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳುವುದು ಕಷ್ಟ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟಿದ್ದಾರೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಭಾಗವತ್, ಬುಡುಕಟ್ಟು ಸಮುದಾಯದ ಭಾಷೆ ಸೇರಿದಂತೆ ದೇಶದಲ್ಲಿರುವ ಎಲ್ಲಾ ಭಾಷೆಗಳಲ್ಲೂ ಶೇ. 30 ರಷ್ಟು ಸಂಸ್ಕೃತ ಪದಗಳಿರುತ್ತವೆ ಎಂದು ಹೇಳಿದರು. 

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕೂಡ ಸಂಸ್ಕೃತವನ್ನು ಕಲಿಯುವ ಅವಕಾಶ ತಮಗೆ ಸಿಗಲಿಲ್ಲ ಎಂದು ವಿಷಾದಿಸಿದ್ದರು ಎಂದು ಭಾಗವತ್ ಅಭಿಪ್ರಾಯಪಟ್ಟಿದ್ದಾರೆ. 

ಸಂಸ್ಕೃತ ಸಂಪರ್ಕ ಭಾಷೆಯಾಗಿ ಬೆಳವಣಿಗೆ ಹೊಂದಬೇಕು ಎಂದಿರುವ ಆರ್‌ಎಸ್‌ಎಸ್ ಮುಖ್ಯಸ್ಥ, ನಮ್ಮ ದೇಶ, ಜನರು ಹಾಗೂ ಸಂಸ್ಕೃತಿಯನ್ನು ತಿಳಿಯಬೇಕಾದರೆ ಪ್ರತಿಯೊಬ್ಬರು  ಸಂಸ್ಕೃತ ಕಲಿಯಬೇಕು ಎಂದು ಮನವಿ ಮಾಡಿದರು.