ಆರ್’ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗೆ ಧ್ವಜಾರೋಹಣ ಮಾಡಲು ಅವಕಾಶ ನೀಡಬೇಡಿ ಎಂದು ಜಿಲ್ಲಾಧಿಕಾರಿ ಆದೇಶ ನೀಡಿದ್ದರೂ ಪಲಕ್ಕಡ್ ಜಿಲ್ಲೆಯ ಶಾಲೆಯೊಂದರಲ್ಲಿ ಮೋಹನ್ ಭಾಗವತ್ ತ್ರಿವರ್ಣ ಧ್ವಜವನ್ನು ಹಾರಿಸಿದ್ದಾರೆ.
ತಿರುವನಂತಪುರಂ (ಆ.15): ಆರ್’ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗೆ ಧ್ವಜಾರೋಹಣ ಮಾಡಲು ಅವಕಾಶ ನೀಡಬೇಡಿ ಎಂದು ಜಿಲ್ಲಾಧಿಕಾರಿ ಆದೇಶ ನೀಡಿದ್ದರೂ ಪಲಕ್ಕಡ್ ಜಿಲ್ಲೆಯ ಶಾಲೆಯೊಂದರಲ್ಲಿ ಮೋಹನ್ ಭಾಗವತ್ ತ್ರಿವರ್ಣ ಧ್ವಜವನ್ನು ಹಾರಿಸಿದ್ದಾರೆ.
ಪಲಕ್ಕಡ್ ಜಿಲ್ಲೆಯ ಕರ್ನಕಿ ಅಮ್ಮನ್ ಸರ್ಕಾರಿ ಅನುದಾನಿತ ಶಾಲೆಯಲ್ಲಿ ಮೋಹನ್ ಭಾಗವತ್ ಇಂದು ಧ್ವಜಾ ರೋಹಣ ಮಾಡಿದ್ದಾರೆ. ಸರ್ಕಾರಿ ಅನುದಾನಿತ ಶಾಲೆಯಲ್ಲಿ ಧ್ವಜಾರೋಹಣ ಮಾಡಲು ಜನಪ್ರತಿನಿಧಿಗಳು ಅಥವಾ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾತ್ರ ಅವಕಾಶ ನೀಡಿ. ರಾಜಕೀಯ ಮುಖಂಡರೊಬ್ಬರಿಗೆ ಧ್ವಜಾರೋಹಣ ಮಾಡಲು ಬಿಡುವುದು ಸರಿಯಲ್ಲ ಎಂದು ಜಿಲ್ಲಾಧಿಕಾರಿ ಮೇರಿ ಕುಟ್ಟಿ ಆದೇಶ ನೀಡಿದ್ದರು. ಆದರೂ ಶಾಲೆಯವರು ಮೋಹನ್ ಭಾಗವತ್'ಗೆ ಅವಕಾಶ ನೀಡಿದ್ದು, ಇಂದು ಕರ್ನಕಿ ಅಮ್ಮನ್ ಶಾಲೆಯಲ್ಲಿ ಧ್ವಜ ಹಾರಿಸಿದ್ದಾರೆ.
ಜಿಲ್ಲಾಧಿಕಾರಿ ಪೊಲೀಸರಿಗೆ ಪತ್ರ ಬರೆದಿದ್ದು, ಭಾಗವತ್ ಮೇಲೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದಾರೆ.
ಸರ್ಕಾರದ ಆದೇಶವನ್ನು ನಾವು ಉಲ್ಲಂಘಿಸಿಲ್ಲ. ಆದೇಶದಂತೆ ಪ್ರಾಂಶುಪಾಲರು ಹಾಗೂ ಶಾಲಾ ಸಿಬ್ಬಂದಿ ಸಮ್ಮುಖದಲ್ಲಿ ಸಾರ್ವಜನಿಕ ವ್ಯಕ್ತಿಯೊಬ್ಬರು ಧ್ವಜಾರೋಹಣ ಮಾಡಬೇಕೆಂದು ಹೇಳಲಾಗಿತ್ತು. ಅದೇ ರೀತಿ ನಾವು ಮೋಹನ್ ಭಾಗವತ್’ಗೆ ಅವಕಾಶ ನೀಡಿದೆವು ಎಂದು ಶಾಲೆಯ ಆಡಳಿತ ಮಂಡಳಿ ಹೇಳಿದೆ.
