ಕೇರಳದಲ್ಲಿ ಆರ್‌'ಎಸ್‌'ಎಸ್ ಕಾರ್ಯಕರ್ತರ ಕೊಲೆಗೆ ವಿಜಯನ್ ಅವರೇ ಕಾರಣ ಎಂದು ಆರೋಪಿಸಿದ್ದ ಚಂದ್ರಾವತ್, ಸಿಎಂ ಶಿರಚ್ಛೇದ ಮಾಡಿದವರಿಗೆ 1 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದ.

ಉಜ್ಜಯಿನಿ(ಮಾ.28): ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಶಿರಚ್ಛೇದ ಮಾಡಿದವರಿಗೆ 1 ಕೋಟಿ ರೂಪಾಯಿ ನೀಡುವುದಾಗಿ ಘೋಷಿಸಿದ್ದ ಆರ್‌'ಎಸ್‌'ಎಸ್'ನ ಮಾಜಿ ಕಾರ್ಯಕರ್ತ ಕುಂದನ್ ಚಂದ್ರಾವತ್‌ನನ್ನು ಬಂಧಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಂದ್ರಾವತ್‌'ನನ್ನು ಸೋಮವಾರ ಬಂಧಿಸಲಾಗಿದ್ದು, ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳದಲ್ಲಿ ಆರ್‌'ಎಸ್‌'ಎಸ್ ಕಾರ್ಯಕರ್ತರ ಕೊಲೆಗೆ ವಿಜಯನ್ ಅವರೇ ಕಾರಣ ಎಂದು ಆರೋಪಿಸಿದ್ದ ಚಂದ್ರಾವತ್, ಸಿಎಂ ಶಿರಚ್ಛೇದ ಮಾಡಿದವರಿಗೆ 1 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿತ್ತು.

ಕುಂದನ್ ಚಂದ್ರಾವತ್ ಅವರ ಹೇಳಿಕೆಯನ್ನು ಖಂಡಿಸಿ ಅವರನ್ನು ಆರೆಸ್ಸೆಸ್ ಸದಸ್ಯತ್ವ ಸ್ಥಾನದಿಂದ ವಜಾಗೊಳಿಸಲಾ 

ಈ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಈ ಸಂಬಂಧ ಮಾಧವ್ ನಗರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.