ರಾಜ್ಯ ವಿಧಾನಸಭೆ ಚುನಾವಣೆಯನ್ನು ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆಯೇ ಹೊರತು ಆರ್‌ಎಸ್‌ಎಸ್ (ರಾಷ್ಟ್ರೀಯ ಸ್ವಯಂಸೇವಕ ಸಂಘ) ಅಲ್ಲ ಎಂದು ಸಂಘದ ದಕ್ಷಿಣ ಮಧ್ಯ ಕ್ಷೇತ್ರದ ಕ್ಷೇತ್ರೀಯ ಸಂಘಚಾಲಕ ವಿ.ನಾಗರಾಜ್ ಸ್ಪಷ್ಟಪಡಿಸಿದ್ದಾರೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯನ್ನು ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆಯೇ ಹೊರತು ಆರ್‌ಎಸ್‌ಎಸ್ (ರಾಷ್ಟ್ರೀಯ ಸ್ವಯಂಸೇವಕ ಸಂಘ) ಅಲ್ಲ ಎಂದು ಸಂಘದ ದಕ್ಷಿಣ ಮಧ್ಯ ಕ್ಷೇತ್ರದ ಕ್ಷೇತ್ರೀಯ ಸಂಘಚಾಲಕ ವಿ.ನಾಗರಾಜ್ ಸ್ಪಷ್ಟಪಡಿಸಿದ್ದಾರೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಚಟುವಟಿಕೆಗಳಿಗೂ ಆರ್‌ಎಸ್ ಎಸ್‌ಗೂ ಸಂಬಂಧ ಇಲ್ಲ ಎಂದು ಹೇಳಿದರು. 

ಬಿಜೆಪಿಯೊಂದಿಗಿನ ಆರ್‌ಎಸ್‌ಎಸ್ ಬಾಂಧವ್ಯ ಉತ್ತಮವಾಗಿದೆ. ಹಾಗಂತ ಚುನಾವಣೆಯನ್ನು ಸಂಘವು ಪ್ರತಿಷ್ಠೆಯಾಗಿ ಪರಿಗಣಿಸಿಲ್ಲ. ಬಿಜೆಪಿ ಮಾತ್ರ ಚುನಾವಣೆಯನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದೆ. ಎಲ್ಲಾ ನಾಯಕರು ನಮಗೆ ಒಂದೇ. ಬಿಜೆಪಿ ರಾಜಕೀಯವಾಗಿ ಯಾವುದೇ ಸಮಸ್ಯೆ ಮಾಡಿಕೊಂಡರೂ ಅದಕ್ಕೂ ನಮಗೂ ಸಂಬಂಧ ಇಲ್ಲ ಎನ್ನುವ ಮೂಲಕ ಅವರು ಬಿಜೆಪಿ, ಆರ್‌ಎಸ್ ಎಸ್ ನಡುವೆ ಭಿನ್ನಮತ ಇದೆ ಎಂಬ ಆರೋಪವನ್ನು ತಳ್ಳಿ ಹಾಕಿದರು.

ಮುಸ್ಲಿಂ ಮತಗಳ ವಿಭಜನೆಗೆ ಆರ್‌ಎಸ್‌ಎಸ್ ಮುಂದಾಗಿದೆ ಎಂಬ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಅಂತಹ ಆರೋಪಗಳು ಕೇವಲ ವಂದತಿ ಮಾತ್ರ. ಮುಸ್ಲಿಂ ಸಮುದಾಯವರು ಆರ್‌ಎಸ್‌ಎಸ್ ಮಾತು ಕೇಳುತ್ತಾರೆಯೇ? ಇಂತಹವರಿಗೆ ಮತ ಚಲಾಯಿಸಿ ಎಂದು ಹೇಳಿದರೆ ಹಾಕುತ್ತಾರಾ ಎಂದು ಪ್ರಶ್ನಿಸಿದರು.