ಕೇರಳದ ಗುರುವಾಯೂರಿನಲ್ಲಿ ಆರೆಸ್ಸೆಸ್ ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿ ಪೊಲೀಸರು 3 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. 

ಗುರುವಾಯೂರು, ಕೇರಳ: ಕೇರಳದ ಗುರುವಾಯೂರಿನಲ್ಲಿ ಆರೆಸ್ಸೆಸ್ ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿ ಪೊಲೀಸರು 3 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಕಳೆದ ಭಾನುವಾರ ತ್ರಿಶೂರ್ ಜಿಲ್ಲೆಯ ಗುರುವಾಯೂರಿನಲ್ಲಿ ಅನಂತ್ ಎಂಬ ಆರೆಸ್ಸೆಸ್ ಕಾರ್ಯಕರ್ತನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದರು.

ನಾಲ್ಕು ವರ್ಷಗಳ ಹಿಂದೆ ನಡೆದ ಕಮ್ಯೂನಿಸ್ಟ್ ಕಾರ್ಯಕರ್ತನೊಬ್ಬನ ಕೊಲೆಯಲ್ಲಿ ಅನಂತ್ ಆರೋಪಿಯಾಗಿದ್ದನು.

ಕೇರಳದಲ್ಲಿ ರಾಜಕೀಯ ಹಿಂಸಾಚಾರಕ್ಕೆ ಬಲ ಹಾಗೂ ಎಡಪಂಥೀಯ ಕಾರ್ಯಕರ್ತರ ಹತ್ಯೆಗಳು ಭಾರೀ ಚರ್ಚೆಗೊಳಗಾಗಿವೆ,

ಬಿಜೆಪಿ ಹಾಗೂ ಆರೆಸ್ಸೆಸ್ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಬಿಜೆಪಿಯು ಇತ್ತೀಚೆಗೆ ರಾಜ್ಯಾದ್ಯಂತ ‘ಜನರಕ್ಷಾ’ ಯಾತ್ರೆಯನ್ನು ಹಮ್ಮಿಕೊಂಡಿತ್ತು.

ಯಾತ್ರೆಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.