ಆರ್​ಎಸ್​ಎಸ್​ ಹಾಗೂ ಸಿಪಿಎಂ ಕಾರ್ಯಕರ್ತರ ಹತ್ಯಾ ಸರಣಿ ಮುಂದುವರಿದಿದೆ. ತ್ರಿಶೂರ್​ನಲ್ಲಿ ಆರ್​ಎಸ್​ಎಸ್​ ಕಾರ್ಯಕರ್ತ ಆನಂದ್​ನನ್ನು ಆರು ಮಂದಿ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ.

ಕೇರಳ(ನ.12): ಆರ್​ಎಸ್​ಎಸ್​ ಹಾಗೂ ಸಿಪಿಎಂ ಕಾರ್ಯಕರ್ತರ ಹತ್ಯಾ ಸರಣಿ ಮುಂದುವರಿದಿದೆ. ತ್ರಿಶೂರ್​ನಲ್ಲಿ ಆರ್​ಎಸ್​ಎಸ್​ ಕಾರ್ಯಕರ್ತ ಆನಂದ್​ನನ್ನು ಆರು ಮಂದಿ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ.

ಮೃತ ಆನಂದ ಸಿಪಿಎಂ ಕಾರ್ಯಕರ್ತನ ಹತ್ಯೆ ಆರೋಪಿಯಾಗಿದ್ದು, ಇತ್ತೀಚೆಗೆ ಬೇಲ್​ ಪಡೆದು ಜೈಲಿನಿಂದ ಹೊರ ಬಂದಿದ್ದ. ಆನಂದ್​ ಬೈಕ್​ನಲ್ಲಿ ಹೋಗುತ್ತಿದ್ದಾಗ ಕಾರಿನಿಂದ ಡಿಕ್ಕಿ ಹೊಡೆದು ಕೆಳಗೆ ಬಿದ್ದಾಗ ಹಲ್ಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿದರೂ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.