ಬೆಲೆ ಇಳಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ ರೈತರ ಈರುಳ್ಳಿಯ ಪ್ರತಿ ಕ್ವಿಂಟಲ್‌ಗೆ ರೂ.100 ಅನುದಾನ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಇದರಿಂದ ಈರುಳ್ಳಿ ಬೆಳೆಗಾರರು ನಿಟ್ಟುಸಿರು ಬಿಡುವಂತಾಗಿದೆ. ಮಂಗಳವಾರ ಸಿಎಂ ದೇವೇಂದ್ರ ಫಡ್ನವೀಸ್ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಕಳೆದ ಜು.1ರಿಂದ ಆ.31 ರೊಳಗೆ ಎಪಿಎಂಸಿಯಲ್ಲಿ ಈರುಳ್ಳಿ ಮಾರಾಟ ಮಾಡಿದ ಎಲ್ಲ ರೈತರೂ ಅನುದಾನ ಪಡೆಯಬಹುದಾಗಿದೆ ಎಂದು ಫಡ್ನವೀಸ್ ಟ್ವೀಟ್ ಮಾಡಿದ್ದಾರೆ. ಆದರೆ, 1 ಕ್ವಿಂಟಲ್ ಈರುಳ್ಳಿ ಬೆಳೆಗೆ ರೈತರು .1250 ವಿನಿಯೋಗಿಸಿರುತ್ತಾರೆ. ಆದರೆ, ರೂ.100 ಅನುದಾನಕ್ಕೆ ಮುಂದಾಗಿದೆ ಎಂದು ಏಷ್ಯಾದ ಈರುಳ್ಳಿ ಮಾರುಕಟ್ಟೆಸಮಿತಿಯ ಅಧ್ಯಕ್ಷ ನಾನಾಸಾಹೇಬ್ ಪಾಟೀಲ್ ಅಸಮಾಧಾನ ವ್ಯರ್ತಪಡಿಸಿದ್ದಾರೆ.
ಈರುಳ್ಳಿಗೆ ರೂ.100 ಅನುದಾನ
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.
Latest Videos
