ಮಾಸ್ಕೋ(ಫೆ.27): ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಎದುರಾಗಿದ್ದು, ಯಾವುದೇ ಕ್ಷಣದಲ್ಲಿ ಯುದ್ಧ ಸಂಭವಿಸುವ ಆತಂಕ ಎದುರಾಗಿದೆ.

ಈ ಮಧ್ಯೆ ಭಾರತ-ಪಾಕ್ ನಡುವಿನ ಬಿಗುವಿನ ವಾತಾವರಣ ತಿಳಿಗೊಳಿಸಲು ಮಧ್ಯಸ್ಥಿಕೆ ವಹಿಸಲು ರಷ್ಯಾ ಒಲವು ತೋರಿದೆ. ಈ ಕುರಿತು ಅಧಿಕೃತ ಹೇಳಿಕೆ ನೀಡಿರುವ ಡ್ಮಿಟ್ರಿ ಪೆಸ್ಕೋವ್, ಭಾರತ-ಪಾಕ್ ನಡುವೆ ರಷ್ಯಾ ಮಧ್ಯಸ್ಥಿಕೆ ವಹಿಸಲು ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.

ಎರಡೂ ರಾಷ್ಟ್ರಗಳ ನಡುವಿನ ಬಿಗುವಿನ ವಾತಾವರಣ ನಿರ್ಮಾಣವಾಗಿರುವುದು ನಿಜಕ್ಕೂ ಖೇದಕರವಾಗಿದ್ದು, ಬಿಗುವಿನ ವಾತಾವರಣ ತಿಳಿಗೊಳಿಸಿ ಶಾಂತಿಯುತ ವಾತಾವರಣ ನಿರ್ಮಿಸಲು ರಷ್ಯಾ ಸಹಕಾರ ನೀಡಲು ಸಿದ್ಧ ಎಂದು ಹೇಳಿದೆ.