ಈ ಇಬ್ಬರು ಮುಖಂಡರು ರಾಮನಗರದ ಜಿ.ಬಿಡದಿ ಹೋಬಳಿ ಕೇತಗಾನಹಳ್ಳಿಯಲ್ಲಿರುವ ಬಡವರ ಭೂಮಿಯನ್ನು ಮೋಸದಿಂದ ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಕಾನೂನು ಕ್ರಮ ಜರುಗಿಸಿ ಭೂಮಿಯನ್ನು ಮರುವಶಕ್ಕೆ ಪಡೆಯಬೇಕು.
ಬೆಂಗಳೂರು(03): ಬಡವರ 200 ಎಕರೆಗೂ ಹೆಚ್ಚು ಜಮೀನನ್ನು ತಮ್ಮ ಹೆಸರಿಗೆ ಅಕ್ರಮವಾಗಿ ಮಾಡಿಕೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮದ್ದೂರಿನ ಶಾಸಕ ಡಿ.ಸಿ. ತಮ್ಮಣ್ಣ ಮತ್ತು ಅವರ ಕುಟುಂಬದ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಆಗ್ರಹಿಸಿದರು.
ಈ ಇಬ್ಬರು ಮುಖಂಡರು ರಾಮನಗರದ ಜಿ.ಬಿಡದಿ ಹೋಬಳಿ ಕೇತಗಾನಹಳ್ಳಿಯಲ್ಲಿರುವ ಬಡವರ ಭೂಮಿಯನ್ನು ಮೋಸದಿಂದ ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಕಾನೂನು ಕ್ರಮ ಜರುಗಿಸಿ ಭೂಮಿಯನ್ನು ಮರುವಶಕ್ಕೆ ಪಡೆಯಬೇಕು. ಈ ಬಗ್ಗೆ ಮುಖ್ಯಮಂತ್ರಿ, ಕಂದಾಯ ಸಚಿವರು ಮತ್ತು ಕಾನೂನು ಸಚಿವರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.
ಲೋಕಾಯುಕ್ತ ಸಂಸ್ಥೆಯಲ್ಲಿ ಭ್ರಷ್ಟಾಚಾರ ಆರೋಪದಲ್ಲಿ ಭಾಸ್ಕರ್ ರಾವ್ ಮೊದಲ ಆರೋಪಿ. ಭಾಸ್ಕರ್ ರಾವ್ ತಮ್ಮ ಮಗನ ಅಕ್ರಮಗಳಿಗೆ ಲೋಕಾಯುಕ್ತ ಕಚೇರಿಯಲ್ಲಿ ಅನುಕೂಲ ಮಾಡಿಕೊಡಿಕೊಟ್ಟಿದ್ದರು.ಇಂತಹ ಅಪರಾಧಿಗೆ ಘೋರ ಶಿಕ್ಷೆ ನೀಡಬೇಕು ಎಂದು ಹೇಳಿದರು.
