Asianet Suvarna News Asianet Suvarna News

ಜೆಡಿಎಸ್‌ನಿಂದ ಸ್ಪರ್ಧಿಸಲು ಸಾರಾ ಗೋವಿಂದು ಉತ್ಸುಕ

ಕನ್ನಡಪರ ಹೋರಾಟಗಳಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಕರ್ನಾಟಕ ರಾಜ್ಯ ಚಲನಚಿತ್ರ ವಾಣಿಜ್ಯಮಂಡಳಿ ಅಧ್ಯಕ್ಷ ಹಾಗೂ ಹಿರಿಯ ಚಿತ್ರ ನಿರ್ಮಾಪಕ ಸಾ.ರಾ.ಗೋವಿಂದು ರಾಜಕೀಯ ಪ್ರವೇಶಿಸಲು ಸಜ್ಜಾಗಿದ್ದು, ಜೆಡಿಎಸ್‌ ಪಕ್ಷದಿಂದ ವಿಧಾನಸಭಾ ಚುನಾವಣಾ ಕಣಕ್ಕಿಳಿಯುವ ಪ್ರಯತ್ನದಲ್ಲಿದ್ದಾರೆ.

Sa Ra Govindu May Contest From JDS

ಬೆಂಗಳೂರು : ಕನ್ನಡಪರ ಹೋರಾಟಗಳಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಕರ್ನಾಟಕ ರಾಜ್ಯ ಚಲನಚಿತ್ರ ವಾಣಿಜ್ಯಮಂಡಳಿ ಅಧ್ಯಕ್ಷ ಹಾಗೂ ಹಿರಿಯ ಚಿತ್ರ ನಿರ್ಮಾಪಕ ಸಾ.ರಾ.ಗೋವಿಂದು ರಾಜಕೀಯ ಪ್ರವೇಶಿಸಲು ಸಜ್ಜಾಗಿದ್ದು, ಜೆಡಿಎಸ್‌ ಪಕ್ಷದಿಂದ ವಿಧಾನಸಭಾ ಚುನಾವಣಾ ಕಣಕ್ಕಿಳಿಯುವ ಪ್ರಯತ್ನದಲ್ಲಿದ್ದಾರೆ.

ರಾಜಾಜಿನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವರು ಆಸಕ್ತಿ ತೋರಿಸಿದ್ದಾರೆ. ಆ ಕ್ಷೇತ್ರದಲ್ಲಿ ಕನ್ನಡ ಪರ ಸಂಘಟನೆಗಳು ಇತರೆ ಕ್ಷೇತ್ರಗಳಿಗೆ ಹೋಲಿಸಿದರೆ ಹೆಚ್ಚಾಗಿವೆ. ಹೀಗಾಗಿ ಅಲ್ಲಿ ಸ್ಪರ್ಧಿಸುವ ಮನಸ್ಸು ಮಾಡಿದ್ದಾರೆ. ಈ ಬಗ್ಗೆ ‘ಕನ್ನಡಪ್ರಭ’ದ ಜತೆ ಮಾತನಾಡಿದ ಸಾ.ರಾ.ಗೋವಿಂದು, ರಾಜಾಜಿನಗರ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದೇನೆ. ಈ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಔಪಚಾರಿಕವಾಗಿ ಮಾತುಕತೆ ನಡೆಸಿ ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೇನೆ. ಮುಂದಿನ ನಿರ್ಧಾರವನ್ನು ಪಕ್ಷದ ವರಿಷ್ಠರು ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಈ ನಡುವೆ, ರಾಜಾಜಿನಗರ ಕ್ಷೇತ್ರದಿಂದ ಉದ್ಯಮಿ ಆನಂದ್‌, ಆರ್‌.ವಿ.ಹರೀಶ್‌ ಸೇರಿದಂತೆ 4-5 ಮಂದಿ ಟಿಕೆಟ್‌ಗಾಗಿ ಲಾಬಿ ನಡೆಸಿದ್ದಾರೆ. ಮೊದಲ ಹಂತದ ಪಟ್ಟಿಯಲ್ಲಿ ರಾಜಾಜಿನಗರ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿಲ್ಲ. ಮುಂದಿನ ತಿಂಗಳು ಪ್ರಕಟವಾಗುವ ಎರಡನೇ ಹಂತದ ಪಟ್ಟಿಯಲ್ಲಿ ರಾಜಾಜಿನಗರ ಕ್ಷೇತ್ರದ ಅಭ್ಯರ್ಥಿಯನ್ನು ಅಂತಿಮಗೊಳಿಸಿ ಘೋಷಣೆ ಮಾಡಲಾಗುತ್ತದೆ. ಆನಂದ್‌ ಅವರು ಸ್ಪರ್ಧಿಸಲು ಇತ್ತೀಚೆಗೆ ಮೊದಲಿನಷ್ಟುಆಸಕ್ತಿ ತೋರುತ್ತಿಲ್ಲ ಎಂಬ ಮಾತುಗಳು ಪಕ್ಷದಲ್ಲಿ ಕೇಳಿಬಂದಿವೆ. ಹೀಗಾಗಿ ಸಾ.ರಾ.ಗೋವಿಂದು ಅವರಿಗೆ ಟಿಕೆಟ್‌ ನೀಡುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎನ್ನಲಾಗಿದೆ.

ಇಂದು ದೇವೇಗೌಡರೊಂದಿಗೆ ಭೇಟಿ?:

ಶುಕ್ರವಾರ ಬೆಳಗ್ಗೆ ಸಾ.ರಾ.ಗೋವಿಂದು ಅವರು ಜೆಡಿಎಸ್‌ ವರಿಷ್ಠರನ್ನು ಭೇಟಿಯಾಗಲಿದ್ದು, ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ. ಮಾತುಕತೆ ವೇಳೆ ಸಾ.ರಾ.ಗೋವಿಂದು ಅವರಿಗೆ ಟಿಕೆಟ್‌ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ಬಗ್ಗೆ ಬಹುತೇಕ ಅಂತಿಮಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Follow Us:
Download App:
  • android
  • ios