ಪ್ರಧಾನಿ ಮೋದಿಯವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಧ್ಯೇಯವನ್ನು ಪಾಲಿಸುತ್ತಾ ಉತ್ತರ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ದುಡಿಯುವುದಾಗಿ ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಲಕ್ನೋ (ಮಾ.18): ಪ್ರಧಾನಿ ಮೋದಿಯವರ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಧ್ಯೇಯದಂತೆ ಉತ್ತರ ಪ್ರದೇಶವನ್ನು ಪ್ರಗತಿ ಪಥದಲ್ಲಿ ಕೊಂಡೊಯ್ಯುವುದಾಗಿ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯಪಾಲರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯೋಗಿ ಆದಿತ್ಯನಾಥ್, ಸರ್ಕಾರ ರಚನೆ ಅವಕಾಶ ಮಾಡಿಕೊಟ್ಟ ರಾಜ್ಯಪಾಲ ರಾಮ್ ನಾಯಕ್ ಅವರಿಗೆ ಧನ್ಯವಾದಗಳು, ಎಂದಿದ್ದಾರೆ.

ಪ್ರಧಾನಿ ಮೋದಿಯವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಧ್ಯೇಯವನ್ನು ಪಾಲಿಸುತ್ತಾ ಉತ್ತರ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ದುಡಿಯುವುದಾಗಿ ಅವರು ಹೇಳಿದ್ದಾರೆ.

ಉತ್ತಮ ಆಡಳಿತವನ್ನು ನೀಡುತ್ತಾ ಪ್ರಗತಿ ಪಥದಲ್ಲಿ ಮುನ್ನಡೆಯುವ ವಿಶ್ವಾಸವನ್ನು ಯೋಗಿ ಆದಿತ್ಯನಾಥ್ ವ್ಯಕ್ತಪಡಿಸಿದ್ದಾರೆ.

44 ವರ್ಷ ಪ್ರಾಯದ ಯೋಗಿ ಆದಿತ್ಯನಾಥ್ 5ನೇ ಬಾರಿ ಸಂಸದರಾಗಿದ್ದಾರೆ. ಬಿಜೆಪಿ 15 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಮರಳಿದೆ.