ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಹಿಂಸಾಚಾರದಲ್ಲಿ ಒಟ್ಟು 1400 ಮಂದಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. 

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ 10 - 50 ವರ್ಷದೊಳಗಿನ ಮಹಿಳೆಯರಿಗೆ ಅಡ್ಡಿಪಡಿಸಿದ್ದ 1400 ಮಂದಿಯನ್ನು ಬಂಧಿಸುವಲ್ಲಿ ಕೇರಳ ಪೊಲೀಸರು ಯಶಸ್ವಿ ಯಾಗಿದ್ದಾರೆ. 

ದೇಗುಲ ಪ್ರವೇಶಕ್ಕೆ ಮಹಿಳೆಯರು ಮುಂದಾದಾಗ ರಾಜ್ಯಾದ್ಯಂತ 440 ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಪೊಲೀಸ್ ಮುಖ್ಯಸ್ಥ ಲೋಕನಾಥ್ ಬೆಹೆರಾ ಗುರುವಾರ ಹೇಳಿದ್ದಾರೆ. 

ಈ ನಡುವೆ, ಈ ಸಂಬಂಧ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಕೇರಳ ರಾಜ್ಯಪಾಲ ಪಿ.ಸದಾಶಿವಂ ಅವರು, ಕೇರಳದಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಮಾಹಿತಿ ನೀಡಿದರು.