ಶಬರಿಮಲೆ :  ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಚಾರ ಗೊತ್ತಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಕೇರಳದಾದ್ಯಂತ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಅನೇಕ ಕಡೆ ಹಿಂಸಾಚಾರ ನಡೆದಿದೆ. 

ಸಿಎಂ ಕಚೇರಿ ಇರುವ ರಾಜ್ಯ ಸಚಿವಾಲಯಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದಾಗ ಸಿಪಿಎಂ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ ನಡೆದಿದೆ. 

ಇಂದು ಕೇರಳ ಬಂದ್‌ಗೆ ಕರೆ

ಅಯ್ಯಪ್ಪ ದೇಗುಲದ ಸಂಪ್ರದಾಯ ಮಹಿಳಾ ಪ್ರವೇಶದೊಂದಿಗೆ ಉಲ್ಲಂಘನೆಯಾದ ಹಿನ್ನೆಲೆಯಲ್ಲಿ ಶಬರಿಮಲೆ ಕರ್ಮ ಸಮಿತಿ ಗುರುವಾರ ಕೇರಳ ಬಂದ್‌ಗೆ ಕರೆ ನೀಡಿದೆ. 

ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಹರತಾಳ ನಡೆಸಲಾಗುತ್ತದೆ ಎಂದು ಘೋಷಿಸಿದೆ. ಮುಂದಿನ 2 ದಿನ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಪ್ರಕಟಿಸಿದೆ.