ನವದೆಹಲಿ(ಫೆ.06): ಮಹತ್ವದ ಬೆಳವಣಿಗೆಯೊಂದರಲ್ಲಿ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ತಿರುವಾಂಕೂರು ದೇವಸ್ವಂ ಮಂಡಳಿ(ಟಿಡಿಬಿ) ಸುಪ್ರೀಂ ಕೋರ್ಟ್‌ನಲ್ಲಿ ಯೂ-ಟರ್ನ್ ಹೊಡೆದಿದೆ. 

ಶಬರಿಮಲೆಗೆ ಕೋರ್ಟ್ ತೀರ್ಪಿಗೆ ತಾನು ಬದ್ಧವಾಗಿದ್ದು, ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದು ದೇವಸ್ವಂ ಮಂಡಳಿ ಹೇಳಿದೆ.

ಇಂದು ಶಬರಿಮಲೆಗೆ ಎಲ್ಲಾ ವಯೋಮಾನದ ಮಹಿಳೆಯರಿಗೂ ಪ್ರವೇಶ ನೀಡಿದ್ದ ಸುಪ್ರೀಂ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮರು ಪರಿಶೀಲನಾ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ಮರುಪರಿಶೀಲನೆಯ ಅಗತ್ಯವಿಲ್ಲ ಎಂದು ಶಬರಿಮಲೆ ಅಯ್ಯಪ್ಪ ದೇಗುಲ ಆಡಳಿತ ಮಂಡಳಿ ಕೋರ್ಟ್ ಗೆ ತಿಳಿಸಿದೆ.