ನವದೆಹಲಿ: ಉಗ್ರವಾದದ ಪ್ರಕರಣಗಳಲ್ಲಿ ಬಂಧಿತ ಎಲ್ಲ ಹಿಂದೂಗಳು ಒಂದಲ್ಲಾ ಒಂದು ರೀತಿ ಆರ್‌ಎಸ್‌ಎಸ್‌ ಜತೆ ನಂಟು ಹೊಂದಿದವರೇ ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್‌ ಮುಖಂಡ ದಿಗ್ವಿಜಯ್‌ ಸಿಂಗ್‌ ಅವರನ್ನು ಪಕ್ಷದಿಂದ ವಜಾ ಮಾಡಬೇಕು ಎಂದು ಬಿಜೆಪಿ ಆಗ್ರಹಿಸಿದೆ. 

ಇಲ್ಲಿನ ಪಕ್ಷದ ಕಾರ್ಯಕ್ರಮದಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ವಕ್ತಾರ ಸಂಬಿತ್‌ ಪಾತ್ರಾ, ಕಾಂಗ್ರೆಸ್‌ ಮತ್ತು ದಿಗ್ವಿಜಯ್‌ ಸಿಂಗ್‌ ವಿರುದ್ಧ ಕಿಡಿಕಾರಿದರು. ಅಲ್ಲದೆ, ಮುಂಬರುವ ಮಧ್ಯಪ್ರದೇಶ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಓಲೈಕೆ ರಾಜಕಾರಣ ಮಾಡುತ್ತಿದೆ. ಅಲ್ಲದೆ, ಕೇಸರಿ ಭಯೋತ್ಪಾದನೆ, ಹಿಂದೂಗಳ ವಿರುದ್ಧ ಆರೋಪ ಮಾಡುವುದು ಕಾಂಗ್ರೆಸ್‌ನ ಮುಖ್ಯ ಅಜೆಂಡಾ ಎಂದು ಪಾತ್ರಾ ದೂರಿದರು.