ರಾಜ್ಯದಲ್ಲಿ ಒಂದೇ ರೀತಿಯ ಹತ್ಯೆಗಳು ನಡೆಯುತ್ತಿದ್ದು, ಇದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಈ ಹತ್ಯೆಗಳಿಗೆ ರಾಜ್ಯ ಸರ್ಕಾರದ ಕುಮ್ಮಕ್ಕು ಇದೆ ಎಂಬ ಸಂಶಯ ಮೂಡುತ್ತಿದೆ. ಇದನ್ನು ಕೇಂದ್ರ ಸರ್ಕಾರ ಕೇಳಲೇ ಬೇಕಾಗುತ್ತದೆ. ಹೀಗಾಗಿ, ಸಂಪೂರ್ಣ ಮಾಹಿತಿಯನ್ನು ಕೇಂದ್ರ ಗೃಹ ಸಚಿವರ ಗಮನಕ್ಕೆ ತರಲಾಗುವುದು ಎಂದು ಡಿವಿಎಸ್ ತಿಳಿಸಿದ್ದಾರೆ.

ಬೆಂಗಳೂರು(ನ.06): ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಸೇರಿದಂತೆ ಸಂಘ ಪರಿವಾರದ ಕಾರ್ಯಕರ್ತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಸದಾನಂದಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಒಂದೇ ರೀತಿಯ ಹತ್ಯೆಗಳು ನಡೆಯುತ್ತಿದ್ದು, ಇದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಈ ಹತ್ಯೆಗಳಿಗೆ ರಾಜ್ಯ ಸರ್ಕಾರದ ಕುಮ್ಮಕ್ಕು ಇದೆ ಎಂಬ ಸಂಶಯ ಮೂಡುತ್ತಿದೆ. ಇದನ್ನು ಕೇಂದ್ರ ಸರ್ಕಾರ ಕೇಳಲೇ ಬೇಕಾಗುತ್ತದೆ. ಹೀಗಾಗಿ, ಸಂಪೂರ್ಣ ಮಾಹಿತಿಯನ್ನು ಕೇಂದ್ರ ಗೃಹ ಸಚಿವರ ಗಮನಕ್ಕೆ ತರಲಾಗುವುದು ಎಂದು ಡಿವಿಎಸ್ ತಿಳಿಸಿದ್ದಾರೆ.

ಭಯ ಹುಟ್ಟಿಸುವ ರೀತಿಯಲ್ಲಿ ಹತ್ಯೆ ಮಾಡಲಾಗುತ್ತಿದೆ. ಇದು ಮುಂದುವರಿದರೆ ರಾಜ್ಯದ ಜನ ರೊಚ್ಚಿಗೆಳಲಿದ್ದಾರೆ. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು ಇಲ್ಲವೇ ಪರಿಸ್ಥಿತಿ ಎದುರಿಸಬೇಕಾದೀತು ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.