ಭೋಪಾಲ್ : ಭೋಪಾಲ್ ನೂತನ ಸಂಸದೆ ಬಿಜೆಪಿ ನಾಯಕಿ ಪ್ರಗ್ಯಾ ಸಿಂಗ್ ಠಾಕೂರ್ ಆಸ್ಪತ್ರೆಗೆ ದಾಖಲಾಗಿದ್ದರು.

ಮಲೆಗಾಂವ್ ಸ್ಫೋಟದ ಆರೋಪಿಯಾಗಿರುವ ಪ್ರಗ್ಯಾ ಹೊಟ್ಟೆ ನೋವಿನ ಸಮಸ್ಯೆಯಿಂದ ಭೋಪಾಲ್ ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು ಗುರುವಾರ ಡಿಸ್ಚಾರ್ಜ್ ಮಾಡಲಾಗಿದೆ. 

ಹೊಟ್ಟೆನೋವಿನಿಂದ ಬಳಲುತ್ತಿದ್ದ ಅವರನ್ನು ಬುಧವಾರ ರಾತ್ರಿ ಆಸ್ಪತ್ರೆ ಬುಧವಾರ ರಾತ್ರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.  ಸೂಕ್ತ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದು, ಡಿಸ್ಚಾರ್ಜ್ ಮಾಡಲಾಗಿದೆ. 

ಈ ವಾರ ಮಲೆಂಗಾವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಗ್ಯಾ ಕೋರ್ಟ್ ಗೆ ಹಾಜರಾಗಬೇಕಿದ್ದು, ಕೋರ್ಟ್ಗೆ ಹಾಜರಾಗುವ ಅವಧಿ ವಿಸ್ತರಣೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಎನ್ ಐ ಎ ವಿಶೇಷ ನ್ಯಾಯಾಧೀಶರಾದ ವಿ.ಎಸ್.ಪಡಲ್ಕರ್ ನಿರಾಕರಿಸಿದ್ದರು. 

ಭೋಪಾಲ್ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಪ್ರಗ್ಯಾ ಸಿಂಗ್ ಕಾಮಗ್ರೆಸ್ ಹಿರಿಯ ನಾಯಕ ದಿಗ್ವಜಯ್ ಸಿಂಗ್ ವಿರುದ್ಧ ಬಹುಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು.