ನಟ ಸಾಯಿಕುಮಾರ್‌ ಬಿಜೆಪಿಯೊಂದಿಗೆ ಗುರುತಿಸಿಕೊಂಡಿರುವುದು ಎಲ್ಲರಿಗೂ ಗೊತ್ತಿರೋ ವಿಚಾರ.  2003 ರಲ್ಲಿ ಬಿಜೆಪಿಗೆ ಸೇರ್ಪಡೆಯಾದ ಸಾಯಿಕುಮಾರ್ 2008ರ ಚುನಾವಣೆಯಲ್ಲಿ ಬಾಗೇಪಲ್ಲಿಯಿಂದ ವಿಧಾನಸಭೆಗೆ ಸ್ಪರ್ಧಿಸಿದ್ದರು. ಆದರೆ ಗೆಲ್ಲಲಿಲ್ಲ. ಇದೀಗ 15 ವರ್ಷಗಳ ಬಳಿಕ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅದೇ ಕ್ಷೇತ್ರದಲ್ಲಿ ಕಣಕ್ಕಿಳಿಯಲು ಸಾಯಿಕುಮಾರ್ ನಿರ್ಧರಿಸಿದ್ದಾರೆ.

ಬೆಂಗಳೂರು (ಅ.27): ನಟ ಸಾಯಿಕುಮಾರ್‌ ಬಿಜೆಪಿಯೊಂದಿಗೆ ಗುರುತಿಸಿಕೊಂಡಿರುವುದು ಎಲ್ಲರಿಗೂ ಗೊತ್ತಿರೋ ವಿಚಾರ. 2003 ರಲ್ಲಿ ಬಿಜೆಪಿಗೆ ಸೇರ್ಪಡೆಯಾದ ಸಾಯಿಕುಮಾರ್ 2008ರ ಚುನಾವಣೆಯಲ್ಲಿ ಬಾಗೇಪಲ್ಲಿಯಿಂದ ವಿಧಾನಸಭೆಗೆ ಸ್ಪರ್ಧಿಸಿದ್ದರು. ಆದರೆ ಗೆಲ್ಲಲಿಲ್ಲ. ಇದೀಗ 15 ವರ್ಷಗಳ ಬಳಿಕ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅದೇ ಕ್ಷೇತ್ರದಲ್ಲಿ ಕಣಕ್ಕಿಳಿಯಲು ಸಾಯಿಕುಮಾರ್ ನಿರ್ಧರಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

"ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಹೆಚ್ಚು ಸ್ಥಾನ ಗೆಲ್ಲೋದೆ ನಮ್ಮ ಗುರಿ. ಈಗಾಗಲೇ ಕ್ಷೇತ್ರದಲ್ಲಿ ಸಂಘಟನೆ ಮಾಡುತ್ತಿದ್ದೇವೆ. ಜನಾರ್ದನ ರೆಡ್ಡಿಯವರಿಗೂ ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧಿಸುವ ಉದ್ದೇಶವಿದೆ. ಆದರೆ ಹೈಕಮಾಂಡ್ ನಿರ್ಧಾರ ಮಾಡಬೇಕು. ಗುಜರಾತ್ ಚುನಾವಣಾ ಬಳಿಕ ಹೆಚ್ಚು ವಿಪಕ್ಷ ಮುಖಂಡರು ಬಿಜೆಪಿ ಸೇರಲಿದ್ದಾರೆ ಎಂದು ಚಿಕ್ಕಬಳ್ಳಾಪುರದಲ್ಲಿ ನಟ ಸಾಯಿಕುಮಾರ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.