ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳ ವೇತನ ಶೀಘ್ರದಲ್ಲಿಯೇ ಹೆಚ್ಚಳವಾಗುವ ಸಾಧ್ಯತೆಯಿದೆ. ಇದಕ್ಕೆ ಸಂಬಂಧಪಟ್ಟಂತೆ ಮುಂದಿನ ಸಂಸತ್ ಅಧಿವೇಶನದಲ್ಲಿ ಸರ್ಕಾರ ಮಸೂದೆಯನ್ನು ತರಲಿದೆ.
ನವದೆಹಲಿ (ಡಿ.15): ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳ ವೇತನ ಶೀಘ್ರದಲ್ಲಿಯೇ ಹೆಚ್ಚಳವಾಗುವ ಸಾಧ್ಯತೆಯಿದೆ. ಇದಕ್ಕೆ ಸಂಬಂಧಪಟ್ಟಂತೆ ಮುಂದಿನ ಸಂಸತ್ ಅಧಿವೇಶನದಲ್ಲಿ ಸರ್ಕಾರ ಮಸೂದೆಯನ್ನು ತರಲಿದೆ.
ಮುಖ್ಯ ನ್ಯಾ. ಟಿ.ಎಸ್ ಠಾಕೂರ್, ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳ ವೇತನವನ್ನು ಹೆಚ್ಚಿಸಬೇಕೆಂದು ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದರು.
ಈ ವಿಚಾರವನ್ನು ಸರ್ಕಾರ ಪರಿಗಣಿಸಿದ್ದು ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಾಧೀಶರ ವೇತನ, ಸೇವಾ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದ್ದು ಫೆಬ್ರವರಿ ಮೊದಲ ವಾರ ಆರಂಭವಾಗಲಿರುವ ಬಜೆಟ್ ಅಧಿವೇಶನದಲ್ಲಿ ಇದನ್ನು ಅನುಮೋದಿಸಲಾಗುವುದು.
ಎಷ್ಟು ಪ್ರಮಾಣದಲ್ಲಿ ವೇತನ ಹೆಚ್ಚಳವಾಗುತ್ತದೆ ಎನ್ನುವ ಮಾಹಿತಿಯನ್ನು ನೀಡಲು ಸರ್ಕಾರಿ ಮೂಲಗಳು ನಿರಾಕರಿಸಿವೆ. ಪ್ರಸ್ತುತ ಸುಪ್ರೀಂಕೋರ್ಟ್ ಜಡ್ಜ್ ಗೆ ತಿಂಗಳಿಗೆ 1.5 ಲಕ್ಷ ವೇತನ ಸಿಗುತ್ತದೆ. ಜೊತೆಗೆ ಉಚಿತವಾಗಿ ಮನೆಯನ್ನು ನೀಡಲಾಗಿದೆ.
