ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ (MSME) ಮಾರುಕಟ್ಟೆ ಸೇವೆಯನ್ನು ಒದಗಿಸುವ ಉದ್ದೇಶದಿಂದ ಬರುವ ನ. 23 ಮತ್ತು 24 ರಂದು ರಾಷ್ಟ್ರೀಯ ಮಾರಾಟಗಾರರ ಮತ್ತು ಬಂಡವಾಳ  ಹೂಡಿಕೆದಾರರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ  ಕೈಗಾರಿಕೆ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.

ಬೆಂಗಳೂರು: ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ (MSME) ಮಾರುಕಟ್ಟೆ ಸೇವೆಯನ್ನು ಒದಗಿಸುವ ಉದ್ದೇಶದಿಂದ ಬರುವ ನ. 23 ಮತ್ತು 24 ರಂದು ರಾಷ್ಟ್ರೀಯ ಮಾರಾಟಗಾರರ ಮತ್ತು ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.

ಈ ಸಮಾವೇಶ ಎಂಎಸ್ಎಂಇ ಮತ್ತು ಬೃಹತ್ ಕೈಗಾರಿಕೆಗಳನ್ನು ಒಂದೆಡೆ ತರಲಿದೆ. ಸಮಾವೆಶದಲ್ಲಿ ಭಾಗವಹಿಸುವ ಸಂಸ್ಥೆಗಳಿಗೆ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡುವ ಅವಕಾಶ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ. ಸಮಾವೇಶದ ಅಂಗವಾಗಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ದೇಶದ ವಿವಿಧ ಭಾಗದಲ್ಲಿ ರೋಡ್ ಶೋ ಹಮ್ಮಿಕೊಳ್ಳಲಾಗುವುದೆಂದು ದೇಶಪಾಂಡೆ ಹೇಳಿದ್ದಾರೆ.

ಹೊಸ ನೀತಿ: ಬೆಂಗಳೂರನ್ನು ವಿದ್ಯುತ್ ವಾಹನಗಳ ರಾಜಧಾನಿಯಾಗಿ ಮತ್ತು ರಾಜ್ಯವನ್ನು ಪರಿಸರ ಸ್ನೇಹಿ ಮಾಡಲು ಸರ್ಕಾರ ‘ನೂತನ ವಿದ್ಯುತ್ ವಾಹನ, ಇಂಧನ ಸಂಗ್ರಹಣಾ ನೀತಿ’ಯನ್ನು ರೂಪಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯಕ್ಕೆ ಮೊದಲ ಸ್ಥಾನ: ಪ್ರಸಕ್ತ ವರ್ಷದ ಜೂನ್’ವರೆಗೆ ರಾಜ್ಯದಲ್ಲಿ 1.40, 683 ಕೋಟಿ ರೂ. ಬಂಡವಾಳ ಹೂಡಿಕೆ ಉದ್ದೇಶ ಹೊಂದಿ ಮೊದಲ ಸ್ಥಾನ ಪಡೆದುಕೊಂಡಿದೆ. 2013ರಲ್ಲಿ ಕರ್ನಾಟಕ 11ನೇ ಸ್ಥಾನದಲ್ಲಿತ್ತು ಎಂದು ದೇಶಪಾಂಡೆ ಹೇಳಿದ್ದಾರೆ.