ಕೃಷ್ಣಮೃಗ ಹತ್ಯೆ ಪ್ರಕರಣದಲ್ಲಿ ಸೂಪರ್ ಸ್ಟಾರ್ ಸಲ್ಮಾನ್ ಖಾನ್‌ಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸುವ ಮೂಲಕ ತಾರತಮ್ಯ ಎಸಗಲಾಗಿದೆ ಎಂದು ಪಾಕ್ ವಿದೇಶಾಂಗ ಸಚಿವರು ಆಪಾದಿಸಿದ್ದಾರೆ.
ನವದೆಹಲಿ: ಕೃಷ್ಣಮೃಗ ಹತ್ಯೆ ಪ್ರಕರಣದಲ್ಲಿ ಸೂಪರ್ ಸ್ಟಾರ್ ಸಲ್ಮಾನ್ ಖಾನ್ಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸುವ ಮೂಲಕ ತಾರತಮ್ಯ ಎಸಗಲಾಗಿದೆ ಎಂದು ಪಾಕ್ ವಿದೇಶಾಂಗ ಸಚಿವರು ಆಪಾದಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸಲ್ಮಾನ್ ಖಾನ್ ಅಲ್ಪಸಂಖ್ಯಾತರಾಗಿರುವುದರಿಂದ ಅವರಿಗೆ ಈ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದೆ ಎಂದು ಪಾಕಿಸ್ತಾನ ವಿದೇಶಾಂಗ ವ್ಯವಹಾರಗಳ ಸಚಿವ ಖವಾಜ ಆಸಿಫ್ ಪ್ರತಿಪಾದಿಸಿದ್ದಾರೆ.
ಸುದ್ದಿವಾಹಿನಿಯೊಂದರ ಸಂದರ್ಶನದಲ್ಲಿ ಅವರು ಈ ಆಪಾದನೆ ಮಾಡಿದ್ದಾರೆ.
