ಸಲ್ಮಾನ್ ಖಾನ್’ಗೆ 5 ವರ್ಷ ಜೈಲು

news | Thursday, April 5th, 2018
Suvarna Web Desk
Highlights

20 ವರ್ಷಗಳ ಹಿಂದೆ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಇತರೆ ನಟರ ವಿರುದ್ಧ ದಾಖಲಾಗಿದ್ದ ಕೃಷ್ಣಮೃಗ ಬೇಟೆ ಪ್ರಕರಣದ ತೀರ್ಪನ್ನು ರಾಜಸ್ಥಾನದ ಜೋಧಪುರ ನ್ಯಾಯಾಲಯ ಪ್ರಕಟಿಸಿದೆ.

ಜೋಧಪುರ: 20 ವರ್ಷಗಳ ಹಿಂದೆ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಇತರೆ ನಟರ ವಿರುದ್ಧ ದಾಖಲಾಗಿದ್ದ ಕೃಷ್ಣಮೃಗ ಬೇಟೆ ಪ್ರಕರಣದ ತೀರ್ಪನ್ನು ರಾಜಸ್ಥಾನದ ಜೋಧಪುರ ನ್ಯಾಯಾಲಯ ಪ್ರಕಟಿಸಿದೆ.

ಚಿತ್ರೋದ್ಯಮ ಹಾಗೂ ಸಲ್ಮಾನ್ ಖಾನ್ ಅಭಿಮಾನಿಗಳು ಕುತೂಹಲದಿಂದ ಎದುರು ನೋಡುತ್ತಿದ್ದ ತೀರ್ಪು ಹೊರ ಬಂದಿದ್ದು, ಪ್ರಕರಣದಲ್ಲಿ ಸಲ್ಮಾನ್ ಖಾನ್ ದೋಷಿ ಎಂದು ತೀರ್ಪಿತ್ತಿದೆ. 

ಸಲ್ಮಾನ್ ಖಾನ್’ಗೆ ಜೋದ್’ಪುರ ಕೋರ್ಟ್’ನಲ್ಲಿ 5 ವರ್ಷಗಳ ಜೈಲು ಶಿಕ್ಷೆ ಪ್ರಕಟವಾಗಿದೆ.

ಹಮ್ ಸಾಥ್ ಸಾಥ್ ಹೇ’ ಚಿತ್ರದ ಶೂಟಿಂಗ್ ವೇಳೆ ನಡೆದಿದ್ದ ಬೇಟೆ ಪ್ರಕರಣ ಇದಾಗಿದ್ದು, ಸಲ್ಮಾನ್ ಖಾನ್ ಮಾತ್ರವೇ ಅಲ್ಲದೇ ಸೈಫ್ ಅಲಿ ಖಾನ್, ಟಬು, ಸೋನಾಲಿ ಬೇಂದ್ರೆ ನೀಲಂ ದೋಷ ಮುಕ್ತರಾಗಿದ್ದಾರೆ.

ಏನಿದು ಪ್ರಕರಣ?:

ಚಿತ್ರೀಕರಣಕ್ಕೆಂದು ರಾಜಸ್ಥಾನದಲ್ಲಿ ತಂಗಿದ್ದ ಸಲ್ಮಾನ್ ಖಾನ್ ಹಾಗೂ ಇತರೆ ಆರೋಪಿಗಳು, 1998ರ ಅ.1 ಹಾಗೂ 2ರ ನಡುವಣ ರಾತ್ರಿ ಜೋಧಪುರ ಬಳಿಯ ಕಂಕಣಿ ಗ್ರಾಮದಲ್ಲಿ ಜಿಪ್ಸಿಯಲ್ಲಿ ಪ್ರಯಾಣಿಸುತ್ತಿದ್ದರು. ಆಗ ಅವರ ಕಣ್ಣಿಗೆ ಕೃಷ್ಣಮೃಗಗಳ ಹಿಂಡು ಕಾಣಿಸಿತ್ತು. ಚಾಲಕನ ಸೀಟಿನಲ್ಲಿ ಕೂತಿದ್ದ ಸಲ್ಮಾನ್ ಆ ಹಿಂಡಿನತ್ತ ಗುಂಡು ಹಾರಿಸಿದ್ದರು. 2 ಕೃಷ್ಣಮೃಗಗಳು ಮೃತಪಟ್ಟಿದ್ದವು. ಇದನ್ನು ಸಾರ್ವಜನಿಕರು ಗಮನಿಸಿ, ಬೆನ್ನಟ್ಟಿದಾಗ, ಮೃತ ಕೃಷ್ಣಮೃಗಗಳನ್ನು ಅಲ್ಲೇ ಬಿಟ್ಟು ಸಲ್ಮಾನ್ ಮತ್ತು ತಂಡ ಪರಾರಿಯಾಗಿತ್ತು ಎಂದು ಸರ್ಕಾರಿ ಅಭಿಯೋಜಕರು ವಾದಿಸಿದ್ದಾರೆ.

ಚಿಂಕಾರಾ ಬೇಟೆ ಕುರಿತ ಪ್ರಕರಣದಲ್ಲೂ ಸಲ್ಮಾನ್ ದೋಷಿ ಎಂದು ಸಾಬೀತಾಗಿ, 5 ವರ್ಷ ಶಿಕ್ಷೆಯಾಗಿತ್ತು. ಆದರೆ ರಾಜಸ್ಥಾನ ಹೈಕೋರ್ಟ್ ಸಲ್ಮಾನ್‌ರನ್ನು ಖುಲಾಸೆಗೊಳಿಸಿತ್ತು. ಇದರ ವಿರುದ್ಧ ರಾಜಸ್ಥಾನ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇದೆ.

Comments 0
Add Comment

  Related Posts

  Salman khan new Gossip news

  video | Saturday, April 7th, 2018

  SC ST Act Effect May Enter Karnataka Part 2

  video | Thursday, April 5th, 2018

  SC ST Act Effect May Enter Karnataka Part 2

  video | Thursday, April 5th, 2018

  Zameer Ahmed Khan Meets CM Siddaramaiah To Lobby For Friends Ticket

  video | Thursday, April 12th, 2018
  Suvarna Web Desk