ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ನಟಿ ಶಿಲ್ಪಾ ಶೆಟ್ಟಿ ವಿರುದ್ಧ ಇಲ್ಲಿನ ಅಂಧೇರಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ನಟಿ ಶಿಲ್ಪಾ ಶೆಟ್ಟಿ ವಿರುದ್ಧ ಇಲ್ಲಿನ ಅಂಧೇರಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಟೀವಿ ಕಾರ್ಯಕ್ರಮವೊಂದರಲ್ಲಿ ಪರಿಶಿಷ್ಟ ಜಾತಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ದೂರುದಾರರು ಆರೋಪಿಸಿದ್ದಾರೆ.

ಬೇರೆ ಬೇರೆ ಟೀವಿ ಕಾರ್ಯಕ್ರಮಗಳಲ್ಲಿ 'ಭಂಗಿ' ಪದವನ್ನು ಬಳಸುವ ಮೂಲಕ ಪರಿಶಿಷ್ಟ ಜಾತಿಗೆ ಅವಮಾನ ಮಾಡಲಾಗಿದೆ ಎಂದು ಹೇಳಲಾಗಿದೆ.

ಸಿನಿತಾರೆಯರ ವಿರುದ್ಧ ದೂರು ದಾಖಲಾದ ಬೆನ್ನಲ್ಲೇ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗವು ವಾರ್ತೆ ಮತ್ತು ಪ್ರಸಾರ ಇಲಾಖೆ ಹಾಗೂ ದೆಹಲಿ ಮತ್ತು ಮುಂಬೈ ಪೊಲೀಸ್ ಆಯುಕ್ತರಿಂದ ವರದಿಯನ್ನು ಕೇಳಿದೆ.

ಪರಿಶಿಷ್ಟ ಜಾತಿ ದೌರ್ಜನ್ಯ ತಡೆ ಕಾಯ್ದೆಯನ್ವಯ ಆರೋಪಿಗಳ ವಿರುದ್ಧ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಒಂದು ವಾರದೊಳಗೆ ಪ್ರತಿಕ್ರಿಯಸಲು ಆಯೊಗವು ಸೂಚಿಸಿದೆ.