ಕಳೆದ 2 ದಿನಗಳ ಹಿಂದೆ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬೆಂಗಳೂರು(ಫೆ.03): ದೇಶ ಕಂಡ ಖ್ಯಾತ ಪರಿಸರವಾದಿ ಸಾಲುಮರದ ತಿಮ್ಮಕ್ಕ ಮತ್ತೆ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ 2 ದಿನಗಳ ಹಿಂದೆ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.
