ನವದೆಹಲಿ[ಫೆ.26]: ಭಾರತೀಯ ವಾಯುಸೇನೆಯು ಗಡಿ ನಿಯಂತ್ರಣಾ ರೇಖೆ ದಾಟಿ ಉಗ್ರರ ಕ್ಯಾಂಪ್ ಗಳ ಮೇಲೆ ದಾಳಿ ನಡೆಸಿದ್ದು, ಪುಲ್ವಾಮಾ ದಾಳಿಗೆ ಭಾರತ ಪ್ರತೀಕಾರ ಪಡೆದುಕೊಂಡಿದೆ. ಹೀಗಿರುವಾಗ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಭಾರತೀಯ ಸೇನೆಯ ವಾಯುಪಡೆಗೆ ಸಲಾಂ ಎಂದಿದ್ದಾರೆ.

ಉಗ್ರರ ಅಡಗು ತಾಣಗಳ ಮೇಲೆ ದಾಳಿ ನಡೆಸಿರುವ ಕುರಿತಾಗಿ ರಾಹುಲ್ ಗಾಂಧಿ ಟ್ವೀಟ್ ಮಾಡಿ 'ಭಾರತೀಯ ವಾಯುಸೇನೆಯ ಪೈಲಟ್ ಗಳಿಗೆ ನನ್ನ ಸಲಾಂ' ಎಂದಿದ್ದಾರೆ. ಈ ಮೂಲಕ ಭಾರತೀಯ ಸೇನೆಯ ದಾಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.