ಬೆಳಗಾವಿ [ಜು.27] : ರಾಜ್ಯದಲ್ಲಿ ಜನರ ನಿರೀಕ್ಷೆಯಂತೆ BS ಯಡಿಯೂರಪ್ಪ ಸರ್ಕಾರ ರಚನೆಯಾಗಿದೆ. ಇದಕ್ಕೆ ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದ್ದಾರೆ. 

ಬೆಳಗಾವಿಯಲ್ಲಿ ಮಾತನಾಡಿದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ, ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದೆ.  ಇದರಿಂದ ರಾಜ್ಯದ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಿದರು. 

'2020ರಲ್ಲಿ ಎಚ್‌.ಡಿ.ಕುಮಾರಸ್ವಾಮಿಯೇ ಮತ್ತೆ ಮುಖ್ಯಮಂತ್ರಿ'

ಇನ್ನು ಅತೃಪ್ತರನ್ನು ಅನರ್ಹಗೊಳಿಸುವ ಮೂಲಕ ಕಾಂಗ್ರೆಸ್ ಹೆದರಿಸುವ ಕೆಲಸ ಮಾಡುತ್ತಿದೆ. ಮೊದಲಿನಿಂದಲೂ ಕಾಂಗ್ರೆಸ್ ಹೆದರಿಸುವ ಕೆಲಸ ಮಾಡುತ್ತಲೇ ಬಂದಿದೆ ಎಂದರು.

ಈಗ ಯೆಡ್ಯೂರಪ್ಪ ಅಲ್ಲ, ಮತ್ತೆ ಯಡಿಯೂರಪ್ಪ!

ಬಿಎಸ್ ವೈ ಸಂಪುಟದಲ್ಲಿ ಬೆಳಗಾವಿ ಜಿಲ್ಲೆಗೆ 4 ಸಚಿವ ಸ್ಥಾನ ನೀಡುವ ಬೇಡಿಕೆ ಇಡಲಾಗಿದೆ. ಹೆಚ್ಚು ಸಿಕ್ಕಷ್ಟು ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಬೆಳಗಾವಿಯಲ್ಲಿ ಸಚಿವ ಸುರೇಶ ಅಂಗಡಿ‌ ಹೇಳಿದ್ದಾರೆ.