Asianet Suvarna News Asianet Suvarna News

ಜೆಡಿಎಸ್‌ ಭಿನ್ನಮತ ಸ್ಫೋಟ: ಸಂದೇಶ್‌ ಸೋದರ ಬಿಜೆಪಿಗೆ

ಟಿಕೆಟ್‌ ಹಂಚಿಕೆ ವಿಚಾರವಾಗಿ ಮೈಸೂರು ಜೆಡಿಎಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ. ನರಸಿಂಹರಾಜ ಕ್ಷೇತ್ರದ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆಯಲ್ಲಿ ಜೆಡಿಎಸ್‌ನ ಪ್ರಾಥಮಿಕ ಸದಸ್ಯತ್ವ ಮತ್ತು ರಾಜ್ಯ ಸಮಿತಿ ಸದಸ್ಯತ್ವಕ್ಕೆ ವಿಧಾನ ಪರಿಷತ್‌ ಸದಸ್ಯ ಸಂದೇಶ್‌ ನಾಗರಾಜ್‌ ಅವರ ಸಹೋದರರೂ ಆದ ಮಾಜಿ ಮೇಯರ್‌ ಸಂದೇಶ್‌ ಸ್ವಾಮಿ ರಾಜೀನಾಮೆ ನೀಡಿದ್ದಾರೆ. ಅವರು ಶುಕ್ರವಾರ ಬಿಜೆಪಿ ಸೇರಲಿದ್ದಾರೆ.

Sandhesh Swamy Join BJp

ಮೈಸೂರು : ಟಿಕೆಟ್‌ ಹಂಚಿಕೆ ವಿಚಾರವಾಗಿ ಮೈಸೂರು ಜೆಡಿಎಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ. ನರಸಿಂಹರಾಜ ಕ್ಷೇತ್ರದ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆಯಲ್ಲಿ ಜೆಡಿಎಸ್‌ನ ಪ್ರಾಥಮಿಕ ಸದಸ್ಯತ್ವ ಮತ್ತು ರಾಜ್ಯ ಸಮಿತಿ ಸದಸ್ಯತ್ವಕ್ಕೆ ವಿಧಾನ ಪರಿಷತ್‌ ಸದಸ್ಯ ಸಂದೇಶ್‌ ನಾಗರಾಜ್‌ ಅವರ ಸಹೋದರರೂ ಆದ ಮಾಜಿ ಮೇಯರ್‌ ಸಂದೇಶ್‌ ಸ್ವಾಮಿ ರಾಜೀನಾಮೆ ನೀಡಿದ್ದಾರೆ. ಅವರು ಶುಕ್ರವಾರ ಬಿಜೆಪಿ ಸೇರಲಿದ್ದಾರೆ.

ವೈಯಕ್ತಿಕ ಕಾರಣದಿಂದ ರಾಜೀನಾಮೆ ನೀಡುತ್ತಿರುವುದಾಗಿ ಪಕ್ಷದ ವರಿಷ್ಠರಿಗೆ ಕಳುಹಿಸಿದ ರಾಜೀನಾಮೆ ಪತ್ರದಲ್ಲಿ ಸಂದೇಶ್‌ ತಿಳಿಸಿದ್ದಾರೆ. ಶುಕ್ರವಾರ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುವ ನವಶಕ್ತಿ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸಮ್ಮುಖದಲ್ಲಿ ಸಂದೇಶ್‌ ಸ್ವಾಮಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇವರೊಡನೆ ಸಂದೇಶ್‌ ನಾಗರಾಜ್‌ ಅವರ ಪುತ್ರ ಸಂದೇಶ್‌ ಕೂಡ ಬಿಜೆಪಿ ಸೇರಲಿದ್ದಾರೆ.

ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾದ ಸಂದೇಶ್‌ ಸ್ವಾಮಿ ಅವರಿಗೆ ಪಕ್ಷದ ಟಿಕೆಟ್‌ ಕೈ ತಪ್ಪಿತ್ತು. ಇದರಿಂದ ಬೇಸರಗೊಂಡು ಕುಮಾರಪರ್ವ ಸಮಾವೇಶ ಸೇರಿದಂತೆ ಪಕ್ಷದ ಚಟುವಟಿಕೆಯಿಂದ ಅವರು ದೂರ ಉಳಿದಿದ್ದರು. ಕಳೆದ ಬಾರಿ ನರಸಿಂಹರಾಜ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು.

ಟಿಕೆಟ್‌ ಕೇಳಿದ್ದೇನೆ: ಈ ಸಂಬಂಧ ‘ಕನ್ನಡಪ್ರಭ’ದ ಜೊತೆ ಪ್ರತಿಕ್ರಿಯಿಸಿದ ಸಂದೇಶ್‌ ಸ್ವಾಮಿ, ನರಸಿಂಹರಾಜ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ಎಂಬುದನ್ನು ಬಿಜೆಪಿಗೆ ತಿಳಿಸಿದ್ದೇನೆ. ಸಂಸದ ಪ್ರತಾಪಸಿಂಹ ಅವರೊಡನೆಯೂ ಮಾತನಾಡಿದ್ದೆ. ಅವರು ಮೊದಲು ಪಕ್ಷಕ್ಕೆ ಸೇರ್ಪಡೆಗೊಳ್ಳಿ. ನಂತರ ಟಿಕೆಟ್‌ ಕುರಿತು ಮಾತನಾಡೋಣ ಎಂದು ತಿಳಿಸಿದ್ದಾರೆ. ಈಗ ಬಿಜೆಪಿ ತತ್ವ, ಸಿದ್ಧಾಂತವನ್ನು ಒಪ್ಪಿ ಪಕ್ಷ ಸೇರುತ್ತಿದ್ದೇನೆ ಎಂದರು.

Follow Us:
Download App:
  • android
  • ios