ಬೆಂಗಳೂರು [ಆ.27]:  ಹಿರಿಯ ಬಿಜೆಪಿ ನಾಯಕ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಕಲ್ಪಿಸದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿಗೆ ಭಾರಿ ಹೊಡೆತ ನೀಡಬೇಕಾಗುತ್ತದೆ ಎಂದು ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಎಚ್ಚರಿಸಿದೆ. 

ಖಾತೆ ಹಂಚಿಕೆಯಲ್ಲಿ ಹಿರಿತನ ಮತ್ತು ರಾಜ್ಯವ್ಯಾಪಿ ಹೊಂದಿರುವ ಜನಪ್ರಿಯತೆ ಪರಿಗಣಿಸದೆ ಈಶ್ವರಪ್ಪ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ತಪ್ಪಿಸಿರುವುದು ಹಿಂದುಳಿದ ವರ್ಗಗಳಿಗೆ ಮಾಡಿ ಅವಮಾನವಾಗಿದೆ. ಇದನ್ನು ತೀವ್ರವಾಗಿ ಬ್ರಿಗೇಡ್‌ ಖಂಡಿಸುತ್ತದೆ. 

ರಾಜ್ಯ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕೂಡಲೇ ಆಗಿರುವ ತಪ್ಪನ್ನು ಸರಿಪಡಿಸಿ ಶೀಘ್ರ ಅವರನ್ನು ಉಪ ಮುಖ್ಯಮಂತ್ರಿ ಎಂದು ಘೋಷಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಭಾರೀ ಹೊಡೆತ ನೀಡಲಾಗುತ್ತದೆ ಎಂದು ಬ್ರಿಗೇಡ್‌ ಅಧ್ಯಕ್ಷ ದೊಡ್ಡಯ್ಯ ಆನೇಕಲ್‌ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.