ಸಿಐಡಿ ಅಧಿಕಾರಿಗಳ ವಿರುದ್ಧ ನಟಿ ಸಂಜನಾ ದೂರು

First Published 17, Feb 2018, 9:22 AM IST
Sanjana Complaint Against CID Officers
Highlights

ಮಲ್ಲೇಶ್ವರದ ಪ್ರಸಿದ್ಧಿ ಚಿಟ್‌ಫಂಡ್ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತನಿಖಾ ತಂಡದ ವಿರುದ್ಧ ನಟಿ ಸಂಜನಾ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಮಲ್ಲೇಶ್ವರದ ಪ್ರಸಿದ್ಧಿ ಚಿಟ್‌ಫಂಡ್ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತನಿಖಾ ತಂಡದ ವಿರುದ್ಧ ನಟಿ ಸಂಜನಾ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ  ಶುಕ್ರವಾರ ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿದ ಅವರು ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಆಯುಕ್ತರ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಜನಾ, ಸಿಐಡಿ ಅಧಿಕಾರಿಗಳು ತ್ವರಿತವಾಗಿ ಪ್ರಕರಣದ ತನಿಖೆ ನಡೆಸುತ್ತಿಲ್ಲ. ಆರೋಪಿಗಳಿಗೆ ಸಿಐಡಿ ಅಧಿಕಾರಿಗಳು ಗೌರವ ಕೂಡವ ಮೂಲಕ ದೂರುದಾರನ್ನೇ ಪ್ರಶ್ನೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೂರುದಾರರನ್ನೇ ಸಾಕ್ಷಿ ಹುಡುಕಿ ಕೊಡುವಂತೆ ತನಿಖೆಯ ಹೊಣೆ ಹೊತ್ತಿರುವ ಸಿಐಡಿ ಅಧಿಕಾರಿಗಳು ಬೇಜವಾಬ್ದಾರಿಯಾಗಿ ಕೇಳುತ್ತಾರೆ.ಪ್ರಕರಣದ ತನಿಖೆ ಬಗ್ಗೆಮಾಹಿತಿ ಪಡೆಯಲಾಗುವುದು ಎಂದು ಆಯುಕ್ತರು ಭರವಸೆ ನೀಡಿದ್ದಾರೆ ಎಂದು ಸಂಜನಾ ತಿಳಿಸಿದರು.

loader