ಈ ಹಿಂದೆ, ದಲ್ಬೀರ್ ಕೌರ್ ಅಕಾಲಿದಳದಲ್ಲಿದ್ದು, ನಂತರ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು. ಇದೀಗ, ತಾವು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.

ಫಝಿಲ್ಕ: ಭಯೋತ್ಪಾದನೆ, ಗೂಢಚರ್ಯೆ ಪ್ರಕರಣದಲ್ಲಿ ಬಂಧಿತನಾಗಿ, ಮೂರು ವರ್ಷದ ಹಿಂದೆ ಪಾಕಿಸ್ತಾನದ ಜೈಲಿನಲ್ಲಿ ಸಾವಿಗೀಡಾದ ಸರಬ್ಜಿತ್ ಸಿಂಗ್ ಅವರ ಸಹೋದರಿ ದಲ್ಬೀರ್ ಕೌರ್ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

‘‘ಬಿಜೆಪಿ ಕಿಸಾನ್ ಮೋರ್ಚಾ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಮತ್ತು ಸಚಿವ ಸುರ್ಜಿತ್ ಜ್ಯಾನಿ ಸಮ್ಮುಖದಲ್ಲಿ ದಲ್ಬೀರ್ ಕೌರ್ ಬಿಜೆಪಿಗೆ ಸೇರ್ಪಡೆಗೊಂಡರು,’’ ಎಂದು ಪಂಜಾಬ್ ಕಿಸಾನ್ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗುರ್ವಿಂದರ್ ಸಿಂಗ್ ಹೇಳಿದ್ದಾರೆ.

ಈ ಹಿಂದೆ, ದಲ್ಬೀರ್ ಕೌರ್ ಅಕಾಲಿದಳದಲ್ಲಿದ್ದು, ನಂತರ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು. ಇದೀಗ, ತಾವು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿರುವುದಾಗಿ ಸ್ವತಃ ಕೌರ್ ಅವರೇ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ.