ಕಾರಾಗೃಹ ಡಿಜಿ ಸತ್ಯನಾರಾಯಣ ಅವರು ಜೈಲಿಗೆ ಭೇಟಿ ನೀಡಿ ಭದ್ರತೆ,ವಿಐಪಿ, ಮೂಲಸೌಕರ್ಯ ಮುಂತಾದವುಗಳನ್ನು ಪರಿಶೀಲನೆ ನಡೆಸಿದ್ದಾರೆ.

ತುಮಕೂರು(ಮಾ.08): ಅಕ್ರಮ ಆಸ್ತಿ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ 4 ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ಅವರನ್ನು ತುಮಕೂರಿನ ಮಹಿಳಾ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ.

ಈ ಸಂಬಂಧವಾಗಿ ಕಾರಾಗೃಹ ಡಿಜಿ ಸತ್ಯನಾರಾಯಣ ಅವರು ತುಮಕೂರಿನ ಜೈಲಿಗೆ ಭೇಟಿ ನೀಡಿ ಭದ್ರತೆ,ವಿಐಪಿ, ಮೂಲಸೌಕರ್ಯ ಮುಂತಾದವುಗಳನ್ನು ಪರಿಶೀಲನೆ ನಡೆಸಿದ್ದು, ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ.