ಪರಪ್ಪನ ಅಗ್ರಹಾರ ಕೇಂದ್ ಕಾರಾಗೃಹದಲ್ಲಿರುವ ಶಶಿಕಲಾಗೆ ಅನಾರೋಗ್ಯ ಕಾಡಿದ್ದು ಅವರನ್ನು ಜೈಲು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರಕಾರಾಗೃಹ ದಲ್ಲಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಆಪ್ತೆಯಾಗಿದ್ದ ಶಶಿಕಲಾ ನಟರಾಜನ್ ಅವರು ಅನಾರೋಗ್ಯದಿಂದ ಬಳಲು ತ್ತಿದ್ದು, ಜೈಲು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಶಿಕಲಾ ಅವರು ರಕ್ತದೊ ತ್ತಡ, ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು, ಗುರು ವಾರ ಬೆಳಗ್ಗೆ ಅಸ್ವಸ್ಥಗೊಂಡಿ ದ್ದಾರೆ. ಅವರನ್ನು ಜೈಲು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶಶಿ ಕಲಾ ಅವರ ಆರೋಗ್ಯದಲ್ಲಿ ಏರುಪೇರಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಶುಕ್ರವಾರ ವಿಕ್ಟೋ ರಿಯಾ ಆಸ್ಪತ್ರೆಗೆ ದಾಖಲಿಸುವ ಸಾಧ್ಯತೆ ಇದೆ ಎಂದು ಜೈಲು ಮೂಲಗಳು ತಿಳಿಸಿವೆ. ಆರು ತಿಂಗಳ ಹಿಂದೆ ಕೂಡ ಶಶಿಕಲಾ ಅವರಿಗೆ ರಕ್ತದೊತ್ತಡ ಹಾಗೂ ಸಕ್ಕರೆ ಖಾಯಿಲೆ ಹೆಚ್ಚಾಗಿತ್ತು. ಚಿಕಿತ್ಸೆ ಬಳಿಕ ಶಶಿಕಲಾ ಗುಣ ಮುಖರಾಗಿದ್ದರು. 

ಇದೀಗ ಪುನಃ ಅವರು ಖಾಯಿಲೆಯಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.