ಕೋರ್ಟ್ ಕೊಠಡಿ ಸಂಖ್ಯೆ 48ರಲ್ಲಿ ಮೂವರನ್ನು ಹಾಜರುಪಡಿಸಲಿರುವ ಪೊಲೀಸರು ತದ ನಂತರ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋಗಲಾಗುತ್ತದೆ.

ಬೆಂಗಳೂರು(ಫೆ.15): ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಶಿಕ್ಷೆ ಪ್ರಕಟವಾದ ಹಿನ್ನೆಲೆಯಲ್ಲಿ ಚೆನ್ನೈನಿಂದ ಬೆಂಗಳೂರಿಗೆ ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರದ ಮ್ಯಾಜಿಸ್ಟ್ರೇಟ್ ಕೋರ್ಟ್​ಗೆ ಶಶಿಕಲಾ ನಟರಾಜನ್ ಹಾಗೂ ಇನ್ನಿಬ್ಬರು ಅಪರಾಧಿಗಳನ್ನು ಪೊಲೀಸರು ಹಾಜರು ಪಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ತಡರಾತ್ರಿ ಎಸಿಪಿ ಸೂರ್ಯನಾರಾಯಣ ನೇತೃತ್ವದಲ್ಲಿ ಭದ್ರತೆ ಕುರಿತಾಗಿ ಸಭೆ ನಡೆಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೋರ್ಟ್ ಕೊಠಡಿ ಸಂಖ್ಯೆ 48ರಲ್ಲಿ ಮೂವರನ್ನು ಹಾಜರುಪಡಿಸಲಿರುವ ಪೊಲೀಸರು ತದ ನಂತರ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋಗಲಾಗುತ್ತದೆ. ಶಶಿಕಲಾ ಆಗಮಿಸುವ ಕಾರಣ ಜೈಲಿನ ಸುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಶಶಿಕಲಾ ನಟರಾಜನ್‌ ಅಪರಾಧಿ ಅಂತ ಸುಪ್ರೀಂ ಕೋರ್ಟ್​ ದ್ವಿಸದಸ್ಯ ಪೀಠ ತೀರ್ಪು ಪ್ರಕಟಿಸಿದೆ. ನ್ಯಾಯಮೂರ್ತಿಗಳಾದ ಪಿ.ಸಿ. ಘೋಷ್ ಮತ್ತು ಅಮಿತ್​​ ರಾಯ್ ಅವರ ವಿಭಾಗೀಯ ಪೀಠ ಶಶಿಕಲಾ, ಇಳವರಸಿ ಹಾಗೂ ಸುಧಾಕರನ್ ಅವರಿಗೆ ತಲಾ 4 ವರ್ಷ ಜೈಲು ಶಿಕ್ಷೆ ಹಾಗೂ 10 ಕೋಟಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.