ಕಾಂಗ್ರೆಸ್ ನಾಯಕಿಯೋರ್ವರು ತಲ್ವಾರ್ ನಿಂದ ಕೇಕ್ ಕಟ್ ಮಾಡಿಕೊಂಡು ಕಾಂಗ್ರೆಸ್ ನಾಯಕಿಯೋರ್ವರು ವಿವಾದ ಸೃಷ್ಟಿಸಿದ್ದಾರೆ.
ಬೆಳಗಾವಿ : ಕಾಂಗ್ರೆಸ್ ನಾಯಕಿಯೋರ್ವರು ತಲ್ವಾರ್ ನಿಂದ ಕೇಕ್ ಕಟ್ ಮಾಡುವ ಮೂಲಕ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪೂರ ದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಬೆಂಬಲಿಗರಾದ ಅಮಿರಾ ದೇಸಾಯಿ ಈ ರೀತಿ ಹುಟ್ಟುಹಬ್ಬ ಆಚರಿಸಿಕೊಂಡು ವಿವಾದಕ್ಕೀಡಾಗಿದ್ದಾರೆ.
ಮೈಸೂರಿನಲ್ಲಿ ಒಮ್ಮೆಯೂ ಜೆಡಿಎಸ್ ಗೆದ್ದಿಲ್ಲ, ಸಿದ್ದರಾಮಯ್ಯ ಮಾತಿನ ಹಿಂದಿನ ಮರ್ಮವೇನು?
ಮಾರ್ಚ್ 1ರ ರಾತ್ರಿ ತಲ್ವಾರ್ ನಿಂದ ಕೇಕ್ ಕಟ್ ಮಾಡಿ ಹುಟ್ಟು ಹಬ್ಬ ಮಾಡಿಕೊಂಡಿದ್ದು, ಈ ಫೊಟೊಗಳೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಬೆಳಗಾವಿ ಜಿಲ್ಲೆಯ ಯಮಕನಮರಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
