ಬೆಳಗಾವಿ[ಆ.21]: ಗೋಕಾಕ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಅವರು ವಸ್ತುವೊಂದನ್ನು ಕಳೆದುಕೊಂಡಿದ್ದಾರೆ ಎಂದು ಈ ಹಿಂದೆಯೇ ಹೇಳಿಕೆ ನೀಡಿದ್ದ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಈ ಬಾರಿ, ಅವರಿಗೆ ಸಚಿವ ಸ್ಥಾನ ಸಿಗದೆ ಎರಡನೇ ವಸ್ತುವನ್ನು ಕಳೆದುಕೊಂಡ ಹಾಗಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಪತನಗೊಳಿಸಲು ಪ್ರಯತ್ನಿಸಿದ್ದ ರಮೇಶ ಮೊದಲೇ ಒಂದು ವಸ್ತುವನ್ನು ಕಳೆದುಕೊಂಡಿದ್ದರು. ಇದೀಗ ಎರಡನೇ ವಸ್ತುವನ್ನು ಕಳೆದುಕೊಂಡಿದ್ದಾರೆ. ಅವರ ಆಸೆ ಪಟ್ಟಿದ್ದ ವಸ್ತು ಕೂಡ ಸಿಗಲಿಲ್ಲ. ಮಂತ್ರಿಗಿರಿಯೂ ಸಿಗಲಿಲ್ಲ. ಎರಡೂ ವಸ್ತುಗಳನ್ನು ರಮೇಶ ಕಳೆದುಕೊಂಡಿದ್ದಾರೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಎಂದು ಅಭಿಪ್ರಾಯಪಟ್ಟರು. ಆದರೆ ಈ ಬಾರಿಯೂ ರಮೇಶ್ ಜಾರಕಿಹೊಳಿ ಕಳೆದುಕೊಂಡಿರುವ ವಸ್ತು ಯಾವುದೆಂದು ಮಾತ್ರ ಸತೀಶ್ ಬಹಿರಂಗಪಡಿಸಲಿಲ್ಲ

ಬಿಎಸ್‌ವೈ ಸಚಿವ ಸಂಪುಟ ವಿಸ್ತರಣೆ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಇದೇವೇಳೆ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವುದು, ಬಿಡುವುದು ಅವರ ಪಕ್ಷಕ್ಕೆ ಬಿಟ್ಟಿಟ್ಟ ವಿಚಾರವಾಗಿದೆ. ಜಾರಕಿಹೊಳಿ ಕುಟುಂಬಕ್ಕೆ ಸಚಿವ ಸ್ಥಾನ ತಪ್ಪಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಆಗಿದೆ ಎಂದು ಹೇಳಿದರು.