ಎಐಸಿಸಿಗೆ ರಾಜೀನಾಮೆ ನೀಡಿದ ಸತೀಶ್ ಜಾರಕಿಹೊಳಿ

Satish Jarkiholi  Quit AICC post
Highlights

  • ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ಜಾರಕಿಹೊಳಿ ರಾಜೀನಾಮೆ
  • ಕೆಪಿಸಿಸಿ ಹಾಗೂ ಎಐಸಿಸಿ ಪತ್ರ ಮುಖೇನ ರವಾನೆ

ಬೆಳಗಾವಿ[ಜೂ.12]: ಮಂತ್ರಿ ಸ್ಥಾನ ಸಿಗದೆ ಬೇಸರಗೊಂಡು ಬಹಿರಂಗವಾಗಿಯೇ ಅತೃಪ್ತಿ ವ್ಯಕ್ತಪಡಿಸಿದ್ದ ಯಮಕನಕರಡಿ ಶಾಸಕ ಸತೀಶ್ ಜಾರಕಿಹೊಳಿ ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ಕೊನೆಗೂ ರಾಜೀನಾಮೆ ನೀಡಿದ್ದಾರೆ.

ಕೆಪಿಸಿಸಿ ಹಾಗೂ ಎಐಸಿಸಿಗೆ ನಿನ್ನೆ ಸಂಜೆಯೇ ರಾಜೀನಾಮೆ ಪತ್ರ ರವಾನಿಸಿರುವ ಅವರು ಶೀಘ್ರದಲ್ಲಿಯೇ ದೆಹಲಿಗೆ ತೆರಳುವುದಾಗಿ ತಿಳಿಸಿದ್ದಾರೆ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಕೊನೆ ಸಮಯದಲ್ಲಿ ಸತೀಶ್ ಜಾರಕಿಹೊಳಿ ಅವರ ಹೆಸರು ಕೈತಪ್ಪಿ ಸತೀಶ್ ಬದಲು ರಮೇಶ್ ಜಾರಕಿಹೊಳಿಗೆ  ಮಂತ್ರಿ ಸ್ಥಾನ ನೀಡಲಾಗಿತ್ತು.

ತಮ್ಮ ನಾಯಕನಿಗೆ ಸಚಿವಸ್ಥಾನ ನೀಡದ ಕಾರಣ ಸತೀಶ್ ನೂರಾರು ಬೆಂಬಲಿಗರು ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಿದ್ದರು. ಆರಂಭದಲ್ಲಿ ಅತೃಪ್ತ ಶಾಸಕ ಎಂ.ಬಿ.ಪಾಟೀಲ್ ಬಣದಲ್ಲಿ ಗುರುತಿಸಿಕೊಂಡಿದ್ದರು.

loader