ಬೆಂಗಳೂರು:  ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ನಿವಾಸಕ್ಕೆ ಇಂದು ಕಾಂಗ್ರೆಸ್ ಮುಖಂಡ ಸತೀಶ್ ಜಾರಕಿಹೊಳಿ ಭೇಟಿ ನೀಡಿದ್ದಾರೆ. 

ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸತೀಶ್ ಜಾರಕಿಹೊಳಿ  ನಡುವಿನ ಈ ಭೇಟಿ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಈಗಾಗಲೇ ಸಚಿವ ಸಂಪುಟ ರಚನೆಯಾಗಿದ್ದು, ಸಂಪುಟದಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎದುರು  ಜಾರಕಿಹೊಳಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. 

ಮೊದಲ ಹಂತದ ಸಂಪುಟ ರಚನೆಯಲ್ಲಿ ಸ್ಥಾನ ಸಿಗದ ಕಾರಣ ಮುಂದಿನ ಬಾರಿ ಸಂಪುಟ ಪುನಾರಚನೆಯಲ್ಲಿ ಸ್ಥಾನ ನೀಡುವ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.