ನವದೆಹಲಿ(ಜು.30): ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆಗೆ ಅಂಗೀಕಾರ ದೊರೆತ ಹಿನ್ನೆಲೆಯಲ್ಲಿ, ಪ್ರಧಾನಿ ಮೋದಿ ಟ್ವೀಟ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ.

ಮಧ್ಯಮ ಯುಗದ ಕ್ರೂರ ಪದ್ದತಿಗೆ ಇಂದು ಇತಿಶ್ರೀ ಹಾಡಲಾಗಿದ್ದು, ಮುಸ್ಲಿಂ ಸಹೋದರಿಯರಿಗೆ ನ್ಯಾಯ ಸಿಕ್ಕಿದೆ ಎಂದು ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

ಮುಸ್ಲಿಂ ಮಹಿಳೆಯರ ಮೇಲೆ ನಡೆಸಲಾಗುತ್ತಿದ್ದ ಐತಿಹಾಸಿಕ ದೌರ್ಜನ್ಯಕ್ಕೆ ಇಂದು ತೆರೆ ಬಿದ್ದಿದ್ದು, ಭಾರತ ಇಂದು ಸಂತೋಷವಾಗಿದೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ ತ್ರಿವಳಿ ತಲಾಖ್ ನಿಷೇಧ ಮಸೂದೆ ಬೆಂಬಲಿಸಿದ ಎಲ್ಲಾ ರಾಜಕೀಯ ಪಕ್ಷಗಳಿಗೆ ಮತ್ತು ಸಂಸದರಿಗೆ ಪ್ರಧಾನಿ ಮೋದಿ ಧನ್ಯವಾದ ಸಲ್ಲಿಸಿದ್ದಾರೆ.