ಇಂದಿನಿಂದ ಶುರುವಾದ ರಾಮಮಂದಿರ-ಬಾಬ್ರಿ ಮಸೀದಿ ಪ್ರಕರಣದ ಅಂತಿಮ ವಿಚಾರಣೆಯನ್ನು ಸುಪ್ರೀಂಕೋರ್ಟ್ ಫೆ. 08 ಕ್ಕೆ ಮುಂದೂಡಿದೆ.
ನವದೆಹಲಿ (ಡಿ.05): ಇಂದಿನಿಂದ ಶುರುವಾದ ರಾಮಮಂದಿರ-ಬಾಬ್ರಿ ಮಸೀದಿ ಪ್ರಕರಣದ ಅಂತಿಮ ವಿಚಾರಣೆಯನ್ನು ಸುಪ್ರೀಂಕೋರ್ಟ್ ಫೆ. 08 ಕ್ಕೆ ಮುಂದೂಡಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾ. ದೀಪಕ್ ಮಿಶ್ರಾ, ಮತ್ತು ನ್ಯಾ. ಅಶೋಕ್ ಭೂಷಣ್ ಮತ್ತು ಎಸ್ ಅಬ್ದುಲ್ ನಜೀರ್ ನೇತೃತ್ವದ ಪೀಠ ಇಂದು ವಿಚಾರಣೆ ನಡೆಸಿ, ಮುಂದಿನ ವಿಚಾರಣೆಯನ್ನು ಫೆ. 08 ಕ್ಕೆ ಮುಂದೂಡಿದೆ.
2019 ಜುಲೈ ನಂತರ ವಿಚಾರಣೆ ನಡೆಸಿ ಎಂದು ಹಿರಿಯ ವಕೀಲ ಕಪಿಲ್ ಸಿಬಲ್ ಮನವಿ ಮಾಡಿಕೊಂಡಿದ್ದಾರೆ. ಏತನ್ಮಧ್ಯೆ ಅಂತಿಮ ವಿಚಾರಣೆಯನ್ನು ಇಷ್ಟು ತುರ್ತಾಗಿ ಕೈಗೆತ್ತಿಕೊಳ್ಳುವ ಅಗತ್ಯವೇನಿದೆ ಎಂದು ಮುಸ್ಲೀಂ ಪರ ವಕೀಲರು ನ್ಯಾಯಾಲಯಕ್ಕೆ ಪ್ರಶ್ನಿಸಿದ್ದಾರೆ.
ಎಲ್ಲಾ ಮನವಿಗಳನ್ನು, ದಾಖಲೆಗಳನ್ನು ಕ್ರೋಢೀಕರಿಸಿ ನ್ಯಾಯಾಲಯಕ್ಕೆ ಸಲ್ಲಿಸಿ ಎಂದು ಸುಪ್ರೀಂಕೋರ್ಟ್ ವಕೀಲರಿಗೆ ಹೇಳಿದೆ.
