ಜಲ್ಲಿಕಟ್ಟು ನಿಷೇಧ ವಿರೋಧಿಸಿ ಮರೀನಾ ಬೀಚ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಕಾವು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಒಂದು ವಾರದವರೆಗೆ ಮಧ್ಯಂತರ ಆದೇಶ ನೀಡದಿರಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.
ನವದೆಹಲಿ (ಜ.20): ಜಲ್ಲಿಕಟ್ಟು ನಿಷೇಧ ವಿರೋಧಿಸಿ ಮರೀನಾ ಬೀಚ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಕಾವು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಒಂದು ವಾರದವರೆಗೆ ಮಧ್ಯಂತರ ಆದೇಶ ನೀಡದಿರಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.
ಅಟಾರ್ನಿ ಜನರಲ್ ಮುಕುಲ್ ರೋಹಟ್ಗಿ ಮುಖ್ಯ ನ್ಯಾ. ಜಗದೀಶ್ ಸಿಂಗ್ ಖೇಹರ್ ಮುಂದೆ ಈ ವಿಚಾರವನ್ನು ಪ್ರಸ್ತಾಪಿಸಿ, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಜಲ್ಲಿಕಟ್ಟು ಬಿಕ್ಕಟ್ಟನ್ನು ನಿವಾರಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದರು.
ಕೇಂದ್ರ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.
