ಕೃಷ್ಣಮೃಗ ಬೇಟೆ ಪ್ರಕರಣದ ಸುದೀರ್ಘ ವಿಚಾರಣೆಯ ಬಳಿಕ ರಾಜಸ್ಥಾನ ಹೈಕೋರ್ಟ್ ನಟ ಸಲ್ಮಾನ್ ಖಾನ್’ಗೆ ಕ್ಲೀನ್ ಚಿಟ್ ನೀಡಿತ್ತು, ಅದನ್ನು ಪ್ರಶ್ನಿಸಿ ರಾಜಸ್ಥಾನ ಸರ್ಕಾರ ಸುಪ್ರೀಂ ಕೋರ್ಟ್’ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು.
ನವದೆಹಲಿ (ನ.11): ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಲ್ಮಾನ್ ಖಾನ್ ವಿರುದ್ಧ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.
1998ರಲ್ಲಿ ಜೋಧಪುರ ವ್ಯಾಪ್ತಿಯಲ್ಲಿ ‘ಹಮ್ ಸಾಥ್ ಸಾಥ್ ಹೈ’ ಚಿತ್ರದ ಶೂಟಿಂಗ್ ವೇಳೆ ಸಲ್ಮಾನ್ ಖಾನ್ ಕೃಷ್ಣಮೃಗವನ್ನು ಕೊಂದಿದ್ದರು ಎಂಬ ಆರೋಪ ಹೊರಿಸಲಾಗಿತ್ತು.
ಪ್ರಕರಣದ ಸುದೀರ್ಘ ವಿಚಾರಣೆಯ ಬಳಿಕ ರಾಜಸ್ಥಾನ ಹೈಕೋರ್ಟ್ ನಟ ಸಲ್ಮಾನ್ ಖಾನ್’ಗೆ ಕ್ಲೀನ್ ಚಿಟ್ ನೀಡಿತ್ತು ಅದನ್ನು ಪ್ರಶ್ನಿಸಿ ರಾಜಸ್ಥಾನ ಸರ್ಕಾರ ಸುಪ್ರೀಂ ಕೋರ್ಟ್’ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು.
