ಆಧಾರ್ ಕಾರ್ಡ್ ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಅರ್ಜಿದಾರರು ಮುಖ್ಯ ನ್ಯಾಯಮೂರ್ತಿಯನ್ನು ಒಳಗೊಂಡ ಸಾಂವಿಧಾನಿಕ  ನ್ಯಾಯಪೀಠದ ಎದುರು ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂಕೋರ್ಟ್ ಇಂದು ಹೇಳಿದೆ.

ನವದೆಹಲಿ (ಜು.07): ಆಧಾರ್ ಕಾರ್ಡ್ ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಅರ್ಜಿದಾರರು ಮುಖ್ಯ ನ್ಯಾಯಮೂರ್ತಿಯನ್ನು ಒಳಗೊಂಡ ಸಾಂವಿಧಾನಿಕ ನ್ಯಾಯಪೀಠದ ಎದುರು ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂಕೋರ್ಟ್ ಇಂದು ಹೇಳಿದೆ.

ನ್ಯಾ. ಚಲಮೇಶ್ವರ್, ನ್ಯಾ. ಎ.ಎಮ್ ಕನ್ವಿಲ್’ಕಾರ್, ಹಾಗೂ ನವೀನ್ ಸಿಂಹ ಒಳಗೊಂಡ ತ್ರಿಸದಸ್ಯ ಪೀಠವು ಆಧಾರ್ ಕಾರ್ಡ್ ಕಡ್ಡಾಯ ಪ್ರಶ್ನಿಸಿ ಅರ್ಜಿ ಸಲ್ಲಿಸಲು ಕೇಳಿದೆ.

ಸರ್ಕಾರದ ಯೋಜನೆಗಳ ಫಲಾನುಭವ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯ ಮಾಡಬೇಕೆ/ಬೇಡವೇ ಎಂದು ಪ್ರಶ್ನಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಕಳೆದ ತಿಂಗಳು ಆದಾಯ ತೆರಿಗೆ ಪಾವತಿಗೆ ಆಧಾರ್ ಕಾರ್ಡನ್ನು ಕಡ್ಡಾಯಗೊಳಿಸಿತ್ತು.

ಇತ್ತೀಚಿಗೆ ಪ್ರತಿಯೊಂದಕ್ಕೂ ಆಧಾರ್ ಕಾರ್ಡನ್ನು ಕಡ್ಡಾಯಗೊಳಿಸುತ್ತಿವುದಕ್ಕೆ ಸಾರ್ವಜನಿಕರಲ್ಲಿ ಅಸಮಾಧಾನ ಉಂಟಾಗಿದೆ.