ರಾಜ್ಯ ನ್ಯಾಯಾಂಗ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಕೇಂದ್ರ  ಸರ್ಕಾರ ಮಂಜೂರು ಮಾಡಿರುವ ರೂ. 9749 ಕೋಟಿ ಮೊತ್ತದ ಬಗ್ಗೆ ವಿವರ ನೀಡುವಂತೆ ಸುಪ್ರೀಂ ಕೋರ್ಟ್  ಕೇಂದ್ರ ಸರ್ಕಾರಕ್ಕೆ ಕೇಳಿದೆ.

ನವದೆಹಲಿ (ನ.29): ರಾಜ್ಯ ನ್ಯಾಯಾಂಗ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಮಂಜೂರು ಮಾಡಿರುವ ರೂ. 9749 ಕೋಟಿ ಮೊತ್ತದ ಬಗ್ಗೆ ವಿವರ ನೀಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಕೇಳಿದೆ.

ರಾಜ್ಯಗಳಲ್ಲಿ ಹೊಸ ಕೋರ್ಟ್ ನಿರ್ಮಾಣ ಮಾಡಲು, ಮೂಲಭೂತ ಸೌಲಭ್ಯವನ್ನು ಒದಗಿಸಲು ಕೇಂದ್ರ ಸರ್ಕಾರ ಹಣವನ್ನು ಮಂಜೂರು ಮಾಡಿತ್ತು. ಈ ಬಗ್ಗೆ ರಾಜ್ಯವಾರು ವಿವರ ನೀಡುವಂತೆ ಸುಪ್ರೀಂ ಕೇಳಿದೆ.

ಇದೇ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ದೇಶದ ಬೇರೆ ಬೇರೆ ರಾಜ್ಯಗಳ ಹೈಕೋರ್ಟ್ ನ್ಯಾಯಾಧೀಶರ ನೇಮಕಕ್ಕೆ ಶಿಫಾರಸ್ಸು ಮಾಡಿರುವ 77 ಜನರಲ್ಲಿ 37 ಜನರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದೆ.