ನವದೆಹಲಿ(ಫೆ.20): ಅಯೋಧ್ಯೆ ರಾಮಜನ್ಮಭೂಮಿ ಭೂ ವಿವಾದ ಪ್ರಕರಣವನ್ನು ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠ ಫೆಬ್ರವರಿ 26ರಂದು ವಿಚಾರಣೆಗೆ ತೆಗೆದುಕೊಳ್ಳಲಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ , ನ್ಯಾಯಮೂರ್ತಿಗಳಾದ ಎಸ್.ಎ. ಬೋಬ್ಡೆ, ಡಿ ವೈ ಚಂದ್ರಚೂಡ, ಅಶೋಕ್ ಭೂಷಣ್ ಹಾಗೂ ಅಬ್ದುಲ್ ನಝೀರ್ ಅವರನ್ನೊಳಗೊಂಡ ಪಂಚ ಸದಸ್ಯರ ಸಾಂವಿಧಾನಿಕ ಪೀಠ ಅಯೋಧ್ಯೆ ವಿವಾದದ ವಿಚಾರಣೆ ನಡೆಸಲಿದೆ.

ಸುಪ್ರೀಂ ಕೋರ್ಟ್‌ನ ಈ ಪಂಚ ಸದಸ್ಯ ಪೀಠ 2010ರ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಲಿದೆ. ಲೋಕಸಭೆ ಚುನಾವಣೆ ಹೊತ್ತಲ್ಲೇ ಅಯೋಧ್ಯೆ ವಿಚಾರಣೆ ಕೂಡ ನಡೆಯುತ್ತಿರುವುದು ಚುನಾವಣೆಯ ಕಾವನ್ನು ಮತ್ತಷ್ಟು ಹೆಚ್ಚಿಸಿದೆ ಎನ್ನಬಹುದು.