ನವದೆಹಲಿ(ಸೆ.06): ಸ್ವಯಂ ಘೋಷಿತ ದೇವಮಾನವ ಅಸರಾಂ ಬಾಪುಗೆ ಮತ್ತೆ ಹಿನ್ನೆಡೆಯುಂಟಾಗಿದ್ದು, ಮಧ್ಯಂತರ ಜಾಮೀನು ನೀಡಲು ಸುಪ್ರೀಂಕೋರ್ಟ್ ಸೋಮವಾರ ನಿರಾಕರಿಸಿದೆ.

ಅತ್ಯಾಚಾರ ಮತ್ತು ಕೊಲೆ ಆರೋಪ ಹೊತ್ತು ಜೈಲು ಸೇರಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ಅವರು ಈ ಹಿಂದೆ ಅನಾರೋಗ್ಯ ಉಂಟಾಗಿದ್ದು, ಪಂಚಕರ್ಮ ಆಯುರ್ವೇದ ಚಿಕಿತ್ಸೆ ಪಡೆದುಕೊಳ್ಳಲು ಕೇರಳ ರಾಜ್ಯಕ್ಕೆ ಹೋಗಬೇಕಾದ್ದರಿಂದ ಮಧ್ಯಂತರ ಜಾಮೀನು ನೀಡುವಂತೆ ಸುಪ್ರೀಂ ಬಳಿ ಮನವಿ ಮಾಡಿದ್ದರು. 

ಈ ಅರ್ಜಿಯನ್ನು ಆ.11 ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ರಾಜಸ್ಥಾನ ಹೈಕೋರ್ಟ್ ನೀಡಿದ್ದ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ನಿರಾಕರಿಸಿತ್ತು. ಅಲ್ಲದೆ, ಅಸಾರಾಂ ಅವರು ಹೇಳುತ್ತಿರುವ ಆರೋಗ್ಯ ಸಮಸ್ಯೆಗಳನ್ನು ಪರೀಕ್ಷಿಸಲು ತ್ರಿಸದಸ್ಯ ವೈದ್ಯಕೀಯ ಸಮಿತಿಯೊಂದನ್ನು ರಚಿಸುವಂತೆ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಆದೇಶ ನೀಡಿತ್ತು. ಇದರಂತೆ ಮತ್ತೆನಿನ್ನೆ ನಡೆದ ವಿಚಾರಣೆಯಲ್ಲಿಯೂ ಕೂಡ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.