ಬೆಂಗಳೂರು (ಸೆ.19): ಮಾಜಿ ಮುಖ್ಯಮಂತ್ರಿ ಎಸ್​.ಎಂ.ಕೃಷ್ಣ ಹಾಗೂ ಎಚ್.​ಡಿ.ಕುಮಾರಸ್ವಾಮಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಅರಣ್ಯ ಭೂಮಿಯನ್ನು ಗಣಿಗಾರಿಕೆಗೆ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದ ತನಿಖೆಯನ್ನು ಎಸ್​ಐಟಿ ನಡೆಸುವಂತೆ ಸುಪ್ರೀಂಕೋರ್ಟ್​ ಆದೇಶಿಸಿದೆ.

ಎಸ್.ಎಂ.ಕೃಷ್ಣ ಹಾಗೂ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅರಣ್ಯ ಭೂಮಿಯನ್ನು ಗಣಿಗಾರಿಕೆಗೆ ನೀಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ದೂರು ನೀಡಿದ್ದರು.

ಈ ಸಂದರ್ಭದಲ್ಲಿ 2012ರಲ್ಲಿ ಸುಪ್ರೀಂಕೋರ್ಟ್​, ಲೋಕಾಯುಕ್ತ ತನಿಖೆಗೆ ತಡೆ ನೀಡಿತ್ತು. ಹೀಗಾಗಿ ಸಾಮಾಜಿಕ ಕಾರ್ಯಕರ್ತ ಟಿ .ಜೆ.ಅಬ್ರಾಹಂ ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್​ ಪ್ರಕರಣದ ತನಿಖೆ ಎಸ್​ಐಟಿಗೆ ವಹಿಸಲು ಆದೇಶಿಸಿದೆ.