ನ್ಯಾ. ಲೋಧಾ ಸಮಿತಿ ಶಿಫಾರಸ್ಸುಗಳನ್ನು ಸಂಪೂರ್ಣವಾಗಿ ಅಳವಡಿಸಿಕೊಳ್ಳಬೇಕು ಎಂದು ತಾನು ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಬಿಸಿಸಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಇಂದು ತಳ್ಳಿ ಹಾಕಿದೆ.
ನವದೆಹಲಿ (ಡಿ.13): ನ್ಯಾ. ಲೋಧಾ ಸಮಿತಿ ಶಿಫಾರಸ್ಸುಗಳನ್ನು ಸಂಪೂರ್ಣವಾಗಿ ಅಳವಡಿಸಿಕೊಳ್ಳಬೇಕು ಎಂದು ತಾನು ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಬಿಸಿಸಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಇಂದು ತಳ್ಳಿ ಹಾಕಿದೆ.
ನ್ಯಾ. ಲೋಧಾ ಸಮಿತಿ ಶಿಫಾರಸ್ಸುಗಳನ್ನು ಪಾಲಿಸಬೇಕೆಂದು ಸುಪ್ರೀಂಕೋರ್ಟ್ ಜುಲೈ 18 ರಂದು ತೀರ್ಪು ನೀಡಿತ್ತು. ಇದನ್ನು ಬಿಸಿಸಿಐ ಉಲ್ಲಂಘಿಸುತ್ತಲೇ ಬಂದಿದೆ. ಇದು ನ್ಯಾಯಾಲಯದ ಅಸಮಾಧಾನಕ್ಕೂ ಸಹ ಕಾರಣವಾಗಿದೆ.
ಬಿಸಿಸಿಐ ಮೇಲ್ಮನವಿಯನ್ನು ನಾವು ಕೂಲಂಕುಷವಾಗಿ ಪರಿಶೀಲಿಸಿದ್ದೇವೆ. ಜುಲೈ 18 ರಂದು ನಾವು ನೀಡಿದ ಆದೇಶದಲ್ಲಿ ಯಾವುದೇ ತಪ್ಪಿಲ್ಲ ಎಂಬುದು ಸ್ಪಷ್ಟ. ಹಾಗಾಗಿ ಬಿಸಿಸಿಐ ಮೇಲ್ಮನವಿಯನ್ನು ತಳ್ಳಿ ಹಾಕಿದ್ದೇವೆ ಎಂದು ಮುಖ್ಯ ನ್ಯಾ.ಠಾಕೂರ್
ಹಾಗೂ ಎಸ್.ಎ ಬೋಬ್ಡೆ ನ್ಯಾಯಪೀಠವು ಹೇಳಿದೆ.
ನಾಳೆ ಅಂತಿಮ ವಿಚಾರಣೆ ನಡೆಯಲಿದ್ದು, ಒಂದು ದಿನ ಮುನ್ನವೇ ನ್ಯಾಯಾಲಯ ಮೇಲ್ಮನವಿಯನ್ನು ವಜಾಗೊಳಿಸಿದೆ. ನಾಳೆ ಬಿಸಿಸಿಐ ಭವಿಷ್ಯ ನಿರ್ಧಾರವಾಗಲಿದೆ.
