ನವದೆಹಲಿ (ಅ.07): ಹಾಜಿ ಅಲಿ ದರ್ಗಾ ಒಳಗೆ ಮಹಿಳೆಯರ ಪ್ರವೇಶಕ್ಕೆ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂಕೊರ್ಟ್ ಅ.17 ರವರೆಗೆ ಮುಂದೂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದರ್ಗಾ ಆಡಳಿತ ಮಂಡಳಿಯ ಮನವಿಯನ್ನು ಆಲಿಸಿದ ನ್ಯಾಯಪೀಠ, ದರ್ಗಾದಲ್ಲಿ ಮಹಿಳೆಯರಿಗೆ ಅವಕಾಶ ನೀಡದೇ ಪುರುಷರಿಗೆ ಮಾತ್ರ ಅವಕಾಶ ನೀಡುತ್ತಿರುವುದರಿಂದ ಸಮಸ್ಯೆ ಸೃಷ್ಟಿಯಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಸರ್ವೋಚ್ಚ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಅ.17 ರಂದು ನಡೆಸಲಿದೆ.

ದರ್ಗಾದ ಒಳಗೆ ಮಹಿಳೆಯರಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಿದ ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹಾಜಿ ಅಲಿ ದರ್ಗಾ ಟ್ರಸ್ಟ್ ಸುಪ್ರೀಂ ಮೆಟ್ಟಿಲೇರಿತ್ತು.