370ನೇ ಪರಿಚ್ಛೇದದ ಪ್ರಕಾರ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ಪರಿಚ್ಛೇದದ ಕಾಲಾವಧಿ ಮುಗಿದಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ನವದೆಹಲಿ: 370ನೇ ಪರಿಚ್ಛೇದದ ಪ್ರಕಾರ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ಪರಿಚ್ಛೇದದ ಕಾಲಾವಧಿ ಮುಗಿದಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕಿರುವ ಪ್ರತ್ಯೇಕ ಸಂವಿಧಾನವನ್ನು ಕಾನೂನುಬಾಹಿರವೆಂದು ಘೋಷಿಸಬೇಕೆಂದು ಅರ್ಜಿಯು ಸುಪ್ರೀಂಗೆ ಮನವಿ ಮಾಡಿದೆ.

ಅರ್ಜಿದಾರರ ವಾದವನ್ನು ಆಲಿಸಿದ ಸುಪ್ರೀಂ, ಕೇಂದ್ರಕ್ಕೆ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ಜಾರಿ ಮಾಡಿದೆ.

ಕಾಶ್ಮೀರ ಕಣಿವೆಯ ಸಂಸ್ಕೃತಿ ಹಾಗೂ ಪರಂಪರೆಯನ್ನು ಕಾಪಾಡಲು ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಅತ್ಯವಶ್ಯವೆಂದು ಮುಖ್ಯಮಂತ್ರಿ ಮಹೆಬೂಬಾ ಮುಫ್ತಿ ಇತ್ತೀಚೆಗೆ ಅಭಿಪ್ರಾಯ ವ್ಯಕ್ತಪಡಿಸಿದ್ದರು.