ಅಬರ್ಬನ್ ನಕ್ಸಲ್ಸ್ ಕುರಿತು ಸುಪ್ರೀಂ ಮಹತ್ವದ ತೀರ್ಪು! ಸಾಮಾಜಿಕ ಹೋರಾಟಗಾರರ ಬಂಧನ ವಿಷಯದಲ್ಲಿ ಮಧ್ಯ ಪ್ರವೇಶಿಸಲ್ಲ! ರೋಮಿಲಾ ಥಾಪರ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ
ನವದೆಹಲಿ(ಸೆ.28): ಭೀಮಾ ಕೊರೆಗಾಂವ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂಬಂತೆ ಸಾಮಾಜಿಕ ಹೋರಾಟಗಾರರ ಬಂಧನದ ವಿಷಯವಾಗಿ ಮಧ್ಯಪ್ರವೇಶಿಸುವುದಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ವರ ವರ ರಾವ್ ಸೇರಿದಂತೆ ಒಟ್ಟು 5 ಸಾಮಾಜಿಕ ಹೋರಾಟಗಾರರು ಬಂಧನಕ್ಕೊಳಗಾಗಿರುವುದನ್ನು ರೋಮಿಲಾ ಥಾಪರ್ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಬಂಧನದ ವಿಷಯವಾಗಿ ಮಧ್ಯಪ್ರವೇಶಿಸುವುದಕ್ಕೆ ನಿರಾಕರಿಸಿದೆ.
ಭಿನ್ನ ಅಭಿಪ್ರಾಯ ಹೊಂದಿರುವ ಸಾಮಾಜಿಕ ಕಾರ್ಯಕರ್ತರು ಎಂಬ ಕಾರಣಕ್ಕಾಗಿ ಅವರನ್ನು ಬಂಧಿಸಲಾಗಿಲ್ಲ. ಬದಲಾಗಿ ಮೇಲ್ನೋಟಕ್ಕೆ ಅವರು ನಿಷೇಧಿತ ಸಿಪಿಐ ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದರ ಬಗ್ಗೆ ಕೆಲವು ಸಾಕ್ಷ್ಯಗಳಿದ್ದವು ಈ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ನ ನ್ಯಾ. ಖನ್ವಾಲಿಕರ್ ಹೇಳಿದ್ದಾರೆ.
